1 ULB ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು. BSB BSB: For the choirmaster. A Maskil of the sons of Korah. We have heard with our ears, O God; our fathers have told us the work You did in their days, in the days of old.
2 ULB ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ. BSB BSB: With Your hand You drove out the nations and planted our fathers there; You crushed the peoples and cast them out.
3 ULB ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ. BSB BSB: For it was not by their sword that they took the land; their arm did not bring them victory. It was by Your right hand, Your arm, and the light of Your face, because You favored them.
4 ULB ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು. BSB BSB: You are my King, O God, who ordains victories for Jacob.
5 ULB ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು. BSB BSB: Through You we repel our foes; through Your name we trample our enemies.
6 ULB ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು. BSB BSB: For I do not trust in my bow, nor does my sword save me.
7 ULB ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ. BSB BSB: For You save us from our enemies; You put those who hate us to shame.
8 ULB ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು. BSB BSB: In God we have boasted all day long, and Your name we will praise forever. Selah
9 ULB ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ. BSB BSB: But You have rejected and humbled us; You no longer go forth with our armies.
10 ULB ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ. BSB BSB: You have made us retreat from the foe, and those who hate us have plundered us.
11 ULB ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ. BSB BSB: You have given us up as sheep to be devoured; You have scattered us among the nations.
12 ULB ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ. BSB BSB: You sell Your people for nothing; no profit do You gain from their sale.
13 ULB ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ. BSB BSB: You have made us a reproach to our neighbors, a mockery and derision to those around us.
14 ULB ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ. BSB BSB: You have made us a byword among the nations, a laughingstock among the peoples.
15 ULB ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ, BSB BSB: All day long my disgrace is before me, and shame has covered my face,
16 ULB ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ. BSB BSB: at the voice of the scorner and reviler, because of the enemy, bent on revenge.
17 ULB ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ! BSB BSB: All this has come upon us, though we have not forgotten You or betrayed Your covenant.
18 ULB ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ. BSB BSB: Our hearts have not turned back; our steps have not strayed from Your path.
19 ULB ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ? BSB BSB: But You have crushed us in the lair of jackals; You have covered us with deepest darkness.
20 ULB ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ, BSB BSB: If we had forgotten the name of our God or spread out our hands to a foreign god,
21 ULB ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ? BSB BSB: would not God have discovered, since He knows the secrets of the heart?
22 ULB ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ. BSB BSB: Yet for Your sake we face death all day long; we are considered as sheep to be slaughtered.
23 ULB ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ. BSB BSB: Wake up, O Lord! Why are You sleeping? Arise! Do not reject us forever.
24 ULB ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ? BSB BSB: Why do You hide Your face and forget our affliction and oppression?
25 ULB ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ. BSB BSB: For our soul has sunk to the dust; our bodies cling to the earth.
26 ULB ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು. BSB BSB: Rise up; be our help! Redeem us on account of Your loving devotion.
Select verses for actions: Enter goes to them and Escape comes back.