1 ULB ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. BSB BSB: For the choirmaster. To the tune of “The Lilies.” A Maskil of the sons of Korah. A love song. My heart is stirred by a noble theme as I recite my verses to the king; my tongue is the pen of a skillful writer.
2 ULB ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ. BSB BSB: You are the most handsome of men; grace has anointed your lips; therefore God has blessed you forever.
3 ULB ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ. BSB BSB: Strap your sword at your side, O mighty warrior; appear in your majesty and splendor.
4 ULB ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ. BSB BSB: In your splendor ride forth in victory on behalf of truth and humility and justice; may your right hand show your awesome deeds.
5 ULB ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು. BSB BSB: Your arrows pierce the hearts of the king’s foes; the nations fall beneath your feet.
6 ULB ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ. BSB BSB: Your throne, O God, endures forever and ever, and justice is the scepter of Your kingdom.
7 ULB ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. BSB BSB: You have loved righteousness and hated wickedness; therefore God, your God, has anointed you above your companions with the oil of joy.
8 ULB ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ. BSB BSB: All your garments are fragrant with myrrh and aloes and cassia; from palaces of ivory the harps make you glad.
9 ULB ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು. BSB BSB: The daughters of kings are among your honored women; the queen stands at your right hand, adorned with the gold of Ophir.
10 ULB ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು. BSB BSB: Listen, O daughter! Consider and incline your ear: Forget your people and your father’s house,
11 ULB ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು. BSB BSB: and the king will desire your beauty; bow to him, for he is your lord.
12 ULB ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು. BSB BSB: The Daughter of Tyre will come with a gift; men of wealth will seek your favor.
13 ULB ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ಚಿನ್ನದಿಂದ ನೇಯ್ದ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ. BSB BSB: All glorious is the princess in her chamber; her gown is embroidered with gold.
14 ULB ಆಕೆಯು ಬೂಟೇದಾರಿ ಕಸೂತಿ ಕೆಲಸದ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು. BSB BSB: In colorful garments she is led to the king; her virgin companions are brought before you.
15 ULB ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು. BSB BSB: They are led in with joy and gladness; they enter the palace of the king.
16 ULB ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ. BSB BSB: Your sons will succeed your fathers; you will make them princes throughout the land.
17 ULB ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು. BSB BSB: I will commemorate your name through all generations; therefore the nations will praise you forever and ever.
Select verses for actions: Enter goes to them and Escape comes back.