Psalm 46 46 Psalms Book 2 Kannada Unlocked Literal Bible 1 ULB ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. BSB BSB: For the choirmaster. Of the sons of Korah. According to Alamoth. A song. God is our refuge and strength, an ever-present help in times of trouble.
2 ULB ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. BSB BSB: Therefore we will not fear, though the earth is transformed and the mountains are toppled into the depths of the seas,
3 ULB ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ BSB BSB: though their waters roar and foam and the mountains quake in the surge. Selah
4 ULB ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ. BSB BSB: There is a river whose streams delight the city of God, the holy place where the Most High dwells.
5 ULB ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. BSB BSB: God is within her; she will not be moved. God will help her when morning dawns.
6 ULB ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. BSB BSB: Nations rage, kingdoms crumble; the earth melts when He lifts His voice.
7 ULB ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ BSB BSB: The LORD of Hosts is with us; the God of Jacob is our fortress. Selah
8 ULB ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. BSB BSB: Come, see the works of the LORD, who brings devastation upon the earth.
9 ULB ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ. BSB BSB: He makes wars to cease throughout the earth; He breaks the bow and shatters the spear; He burns the shields in the fire.
10 ULB << ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ>> ಎಂದು ಹೇಳಿದ್ದಾನೆ. BSB BSB: “Be still and know that I am God; I will be exalted among the nations, I will be exalted over the earth.”
11 ULB ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ. BSB BSB: The LORD of Hosts is with us; the God of Jacob is our fortress. Selah
Select verses for actions: Enter goes to them and Escape comes back.
Chapter complete
You’ve read Psalm 46
Make Opened yours A free account keeps your place, highlights and notes on every device. Add Plus to ask Study Help about Psalm 46, and keep Opened free for readers who can’t pay.