1 ULB ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. BSB BSB: For the choirmaster, to be accompanied by flutes. A Psalm of David. Give ear to my words, O LORD; consider my groaning.
2 ULB ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು. BSB BSB: Attend to the sound of my cry, my King and my God, for to You I pray.
3 ULB ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು. BSB BSB: In the morning, O LORD, You hear my voice; at daybreak I lay my plea before You and wait in expectation.
4 ULB ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು. BSB BSB: For You are not a God who delights in wickedness; no evil can dwell with You.
5 ULB ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ. BSB BSB: The boastful cannot stand in Your presence; You hate all workers of iniquity.
6 ULB ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ. BSB BSB: You destroy those who tell lies; the LORD abhors the man of bloodshed and deceit.
7 ULB ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು. BSB BSB: But I will enter Your house by the abundance of Your loving devotion; in reverence I will bow down toward Your holy temple.
8 ULB ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. BSB BSB: Lead me, O LORD, in Your righteousness because of my enemies; make straight Your way before me.
9 ULB ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ. BSB BSB: For not a word they speak can be trusted; destruction lies within them. Their throats are open graves; their tongues practice deceit.
10 ULB ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. BSB BSB: Declare them guilty, O God; let them fall by their own devices. Drive them out for their many transgressions, for they have rebelled against You.
11 ULB ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು. BSB BSB: But let all who take refuge in You rejoice; let them ever shout for joy. May You shelter them, that those who love Your name may rejoice in You.
12 ULB ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು. BSB BSB: For surely You, O LORD, bless the righteous; You surround them with the shield of Your favor.
Select verses for actions: Enter goes to them and Escape comes back.