1 ULB ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. BSB BSB: For the choirmaster. A Psalm of David. When Nathan the prophet came to him after his adultery with Bathsheba. Have mercy on me, O God, according to Your loving devotion; according to Your great compassion, blot out my transgressions.
2 ULB ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. BSB BSB: Wash me clean of my iniquity and cleanse me from my sin.
3 ULB ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. BSB BSB: For I know my transgressions, and my sin is always before me.
4 ULB ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. BSB BSB: Against You, You only, have I sinned and done what is evil in Your sight, so that You may be proved right when You speak and blameless when You judge.
6 ULB ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. BSB BSB: Surely You desire truth in the inmost being; You teach me wisdom in the inmost place.
7 ULB ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು. BSB BSB: Purify me with hyssop, and I will be clean; wash me, and I will be whiter than snow.
8 ULB ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು. BSB BSB: Let me hear joy and gladness; let the bones You have crushed rejoice.
9 ULB ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. BSB BSB: Hide Your face from my sins and blot out all my iniquities.
10 ULB ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. BSB BSB: Create in me a clean heart, O God, and renew a right spirit within me.
11 ULB ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. BSB BSB: Cast me not away from Your presence; take not Your Holy Spirit from me.
12 ULB ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. BSB BSB: Restore to me the joy of Your salvation, and sustain me with a willing spirit.
13 ULB ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು. BSB BSB: Then I will teach transgressors Your ways, and sinners will return to You.
14 ULB ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. BSB BSB: Deliver me from bloodguilt, O God, the God of my salvation, and my tongue will sing of Your righteousness.
15 ULB ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು. BSB BSB: O Lord, open my lips, and my mouth will declare Your praise.
16 ULB ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. BSB BSB: For You do not delight in sacrifice, or I would bring it; You take no pleasure in burnt offerings.
17 ULB ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ. BSB BSB: The sacrifices of God are a broken spirit; a broken and a contrite heart, O God, You will not despise.
18 ULB ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. BSB BSB: In Your good pleasure, cause Zion to prosper; build up the walls of Jerusalem.
19 ULB ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು. BSB BSB: Then You will delight in righteous sacrifices, in whole burnt offerings; then bulls will be offered on Your altar.
Select verses for actions: Enter goes to them and Escape comes back.