1 ULB ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ. BSB BSB: For the choirmaster. With stringed instruments. A Maskil of David. Listen to my prayer, O God, and do not ignore my plea.
2 ULB ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು. BSB BSB: Attend to me and answer me. I am restless in my complaint, and distraught
3 ULB ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ. BSB BSB: at the voice of the enemy, at the pressure of the wicked. For they bring down disaster upon me and resent me in their anger.
4 ULB ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ. BSB BSB: My heart pounds within me, and the terrors of death assail me.
5 ULB ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ. BSB BSB: Fear and trembling grip me, and horror has overwhelmed me.
6 ULB ನಾನು, <<ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು. BSB BSB: I said, “Oh, that I had wings like a dove! I would fly away and find rest.
7 ULB ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು, BSB BSB: How far away I would flee! In the wilderness I would remain. Selah
8 ULB ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು>> ಅಂದುಕೊಂಡೆನು. ಸೆಲಾ BSB BSB: I would hurry to my shelter, far from this raging tempest.”
9 ULB ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ. BSB BSB: O Lord, confuse and confound their speech, for I see violence and strife in the city.
10 ULB ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ. BSB BSB: Day and night they encircle the walls, while malice and trouble lie within.
11 ULB ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು. BSB BSB: Destruction is within; oppression and deceit never leave the streets.
12 ULB ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು. BSB BSB: For it is not an enemy who insults me; that I could endure. It is not a foe who rises against me; from him I could hide.
13 ULB ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ. BSB BSB: But it is you, a man like myself, my companion and close friend.
14 ULB ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ. BSB BSB: We shared sweet fellowship together; we walked with the crowd into the house of God.
15 ULB ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ. BSB BSB: Let death seize them by surprise; let them go down to Sheol alive, for evil is with them in their homes.
16 ULB ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು. BSB BSB: But I call to God, and the LORD saves me.
17 ULB ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ BSB BSB: Morning, noon, and night, I cry out in distress, and He hears my voice.
18 ULB ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು. BSB BSB: He redeems my soul in peace from the battle waged against me, even though many oppose me.
19 ULB ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ. BSB BSB: God will hear and humiliate them—the One enthroned for the ages—Selah because they do not change and they have no fear of God.
20 ULB ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ. BSB BSB: My companion attacks his friends; he violates his covenant.
21 ULB ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ. BSB BSB: His speech is smooth as butter, but war is in his heart. His words are softer than oil, yet they are swords unsheathed.
22 ULB ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು. BSB BSB: Cast your burden upon the LORD and He will sustain you; He will never let the righteous be shaken.
23 ULB ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು. BSB BSB: But You, O God, will bring them down to the Pit of destruction; men of bloodshed and deceit will not live out half their days. But I will trust in You.
Select verses for actions: Enter goes to them and Escape comes back.