Psalm 58 58 Psalms Book 2 Kannada Unlocked Literal Bible 1 ULB ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ? BSB BSB: For the choirmaster. To the tune of “Do Not Destroy.” A Miktam of David. Do you indeed speak justly, O rulers? Do you judge uprightly, O sons of men?
2 ULB ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ. BSB BSB: No, in your hearts you devise injustice; with your hands you mete out violence on the earth.
3 ULB ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು. BSB BSB: The wicked are estranged from the womb; the liars go astray from birth.
4 ULB ಅವರು ಸರ್ಪದಂತೆ ವಿಷಭರಿತರು. BSB BSB: Their venom is like the venom of a snake, like a cobra that shuts its ears,
5 ULB ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ. BSB BSB: refusing to hear the tune of the charmer who skillfully weaves his spell.
6 ULB ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು. BSB BSB: O God, shatter their teeth in their mouths; O LORD, tear out the fangs of the lions.
7 ULB ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ. BSB BSB: May they vanish like water that runs off; when they draw the bow, may their arrows be blunted.
8 ULB ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ. BSB BSB: Like a slug that dissolves in its slime, like a woman’s stillborn child, may they never see the sun.
9 ULB ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ. BSB BSB: Before your pots can feel the burning thorns—whether green or dry—He will sweep them away.
10 ULB ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು. BSB BSB: The righteous will rejoice when they see they are avenged; they will wash their feet in the blood of the wicked.
11 ULB ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು. BSB BSB: Then men will say, “There is surely a reward for the righteous! There is surely a God who judges the earth!”
Select verses for actions: Enter goes to them and Escape comes back.
Chapter complete
You’ve read Psalm 58
Make Opened yours A free account keeps your place, highlights and notes on every device. Add Plus to ask Study Help about Psalm 58, and keep Opened free for readers who can’t pay.