1 ULB ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು. BSB BSB: For the choirmaster. To the tune of “Do Not Destroy.” A Miktam of David, when Saul sent men to watch David’s house in order to kill him. Deliver me from my enemies, O my God; protect me from those who rise against me.
2 ULB ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. BSB BSB: Deliver me from workers of iniquity, and save me from men of bloodshed.
3 ULB ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ! BSB BSB: See how they lie in wait for me. Fierce men conspire against me for no transgression or sin of my own, O LORD.
4 ULB ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು. BSB BSB: For no fault of my own, they move swiftly to attack me. Arise to help me, and take notice.
5 ULB ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ BSB BSB: O LORD God of Hosts, the God of Israel, rouse Yourself to punish all the nations; show no mercy to the wicked traitors. Selah
6 ULB ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ. BSB BSB: They return in the evening, snarling like dogs and prowling around the city.
7 ULB ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, <<ನಮ್ಮನ್ನು ಕೇಳುವವರು ಯಾರು?>> ಅಂದುಕೊಳ್ಳುತ್ತಾರೆ. BSB BSB: See what they spew from their mouths—sharp words from their lips: “For who can hear us?”
8 ULB ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ. BSB BSB: But You, O LORD, laugh at them; You scoff at all the nations.
9 ULB ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ. BSB BSB: I will keep watch for You, O my strength, because You, O God, are my fortress.
10 ULB ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು. BSB BSB: My God of loving devotion will come to meet me; God will let me stare down my foes.
11 ULB ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. BSB BSB: Do not kill them, or my people will forget. Scatter them by Your power, and bring them down, O Lord, our shield.
12 ULB ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ. BSB BSB: By the sins of their mouths and the words of their lips, let them be trapped in their pride, in the curses and lies they utter.
13 ULB ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ BSB BSB: Consume them in wrath; consume them till they are no more, so it may be known to the ends of the earth that God rules over Jacob. Selah
14 ULB ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ. BSB BSB: They return in the evening, snarling like dogs and prowling around the city.
15 ULB ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ. BSB BSB: They scavenge for food, and growl if they are not satisfied.
16 ULB ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. BSB BSB: But I will sing of Your strength and proclaim Your loving devotion in the morning. For You are my fortress, my refuge in times of trouble.
17 ULB ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ. BSB BSB: To You, O my strength, I sing praises, for You, O God, are my fortress, my God of loving devotion.
Select verses for actions: Enter goes to them and Escape comes back.