1 ULB ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ. BSB BSB: For the choirmaster. A Psalm of David. A song. Praise awaits You, O God, in Zion; to You our vows will be fulfilled.
2 ULB ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು. BSB BSB: O You who listen to prayer, all people will come to You.
3 ULB ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ. BSB BSB: When iniquities prevail against me, You atone for our transgressions.
4 ULB ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ. BSB BSB: Blessed is the one You choose and bring near to dwell in Your courts! We are filled with the goodness of Your house, the holiness of Your temple.
5 ULB ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. BSB BSB: With awesome deeds of righteousness You answer us, O God of our salvation, the hope of all the ends of the earth and of the farthest seas.
6 ULB ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು. BSB BSB: You formed the mountains by Your power, having girded Yourself with might.
7 ULB ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ. BSB BSB: You stilled the roaring of the seas, the pounding of their waves, and the tumult of the nations.
8 ULB ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. BSB BSB: Those who live far away fear Your wonders; You make the dawn and sunset shout for joy.
9 ULB ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. BSB BSB: You attend to the earth and water it; with abundance You enrich it. The streams of God are full of water, for You prepare our grain by providing for the earth.
10 ULB ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. BSB BSB: You soak its furrows and level its ridges; You soften it with showers and bless its growth.
11 ULB ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. BSB BSB: You crown the year with Your bounty, and Your paths overflow with plenty.
12 ULB ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. BSB BSB: The pastures of the wilderness overflow; the hills are robed with joy.
13 ULB ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ. BSB BSB: The pastures are clothed with flocks, and the valleys are decked with grain. They shout in triumph; indeed, they sing.
Select verses for actions: Enter goes to them and Escape comes back.