1 ULB ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ. BSB BSB: For the choirmaster. A Psalm of David. A song. God arises. His enemies are scattered, and those who hate Him flee His presence.
2 ULB ಹೊಗೆಯು ಗಾಳಿಯಿಂದ ಹೇಗೋ, ಹಾಗೆ ಅವರು ಆತನಿಂದ ಹಾರಿಹೋಗಲಿ; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ. BSB BSB: As smoke is blown away, You will drive them out; as wax melts before the fire, the wicked will perish in the presence of God.
3 ULB ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಉಲ್ಲಾಸಿಸಲಿ, ಆನಂದಧ್ವನಿಮಾಡಲಿ. BSB BSB: But the righteous will be glad and rejoice before God; they will celebrate with joy.
4 ULB ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ. BSB BSB: Sing to God! Sing praises to His name. Exalt Him who rides on the clouds—His name is the LORD—and rejoice before Him.
5 ULB ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ. BSB BSB: A father of the fatherless and a defender of widows is God in His holy habitation.
6 ULB ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು. BSB BSB: God settles the lonely in families; He leads the prisoners out to prosperity, but the rebellious dwell in a sun-scorched land.
7 ULB ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, ಸೆಲಾ BSB BSB: O God, when You went out before Your people, when You marched through the wasteland, Selah
8 ULB ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು. BSB BSB: the earth shook and the heavens poured down rain before God, the One on Sinai, before God, the God of Israel.
9 ULB ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ. BSB BSB: You sent abundant rain, O God; You refreshed Your weary inheritance.
10 ULB ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ. BSB BSB: Your flock settled therein; O God, from Your bounty You provided for the poor.
11 ULB ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು. BSB BSB: The Lord gives the command; a great company of women proclaim it:
12 ULB ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ. BSB BSB: “Kings and their armies flee in haste; she who waits at home divides the plunder.
13 ULB ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ. BSB BSB: Though you lie down among the sheepfolds, the wings of the dove are covered with silver, and her feathers with shimmering gold.”
14 ULB ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು. BSB BSB: When the Almighty scattered the kings in the land, it was like the snow falling on Zalmon.
15 ULB ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ. BSB BSB: A mountain of God is Mount Bashan; a mountain of many peaks is Mount Bashan.
16 ULB ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು. BSB BSB: Why do you gaze in envy, O mountains of many peaks? This is the mountain God chose for His dwelling, where the LORD will surely dwell forever.
17 ULB ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ. BSB BSB: The chariots of God are tens of thousands—thousands of thousands are they; the Lord is in His sanctuary as He was at Sinai.
18 ULB ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ. BSB BSB: You have ascended on high; You have led captives away. You have received gifts from men, even from the rebellious, that the LORD God may dwell there.
19 ULB ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ BSB BSB: Blessed be the Lord, who daily bears our burden, the God of our salvation. Selah
20 ULB ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ. BSB BSB: Our God is a God of deliverance; the Lord GOD is our rescuer from death.
21 ULB ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು. BSB BSB: Surely God will crush the heads of His enemies, the hairy crowns of those who persist in guilty ways.
22 ULB ಕರ್ತನು, <<ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು. BSB BSB: The Lord said, “I will retrieve them from Bashan, I will bring them up from the depths of the sea,
23 ULB ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು>> ಎಂದು ನುಡಿದನು. BSB BSB: that your foot may be dipped in the blood of your foes—the tongues of your dogs in the same.”
24 ULB ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ. BSB BSB: They have seen Your procession, O God—the march of my God and King into the sanctuary.
25 ULB ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ, BSB BSB: The singers lead the way, the musicians follow after, among the maidens playing tambourines.
26 ULB <<ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ>> ಎಂದು ಹಾಡುತ್ತಾರೆ. BSB BSB: Bless God in the great congregation; bless the LORD from the fountain of Israel.
27 ULB ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ. BSB BSB: There is Benjamin, the youngest, ruling them, the princes of Judah in their company, the princes of Zebulun and of Naphtali.
28 ULB ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು. ನಿನ್ನ ಮಂದಿರದಲ್ಲಿ ಆಸೀನನಾಗಿ ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು. BSB BSB: Summon Your power, O God; show Your strength, O God, which You have exerted on our behalf.
29 ULB ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ. BSB BSB: Because of Your temple at Jerusalem kings will bring You gifts.
30 ULB ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು. BSB BSB: Rebuke the beast in the reeds, the herd of bulls among the calves of the nations, until it submits, bringing bars of silver. Scatter the nations who delight in war.
32 ULB ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ BSB BSB: Sing to God, O kingdoms of the earth; sing praises to the Lord—Selah
33 ULB ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು. BSB BSB: to Him who rides upon the highest heavens of old; behold, His mighty voice resounds.
34 ULB ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ. BSB BSB: Ascribe the power to God, whose majesty is over Israel, whose strength is in the skies.
35 ULB ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ. BSB BSB: O God, You are awesome in Your sanctuary; the God of Israel Himself gives strength and power to His people. Blessed be God!
Select verses for actions: Enter goes to them and Escape comes back.