1 ULB ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ. BSB BSB: In You, O LORD, I have taken refuge; let me never be put to shame.
2 ULB ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು. BSB BSB: In Your justice, rescue and deliver me; incline Your ear and save me.
3 ULB ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ. BSB BSB: Be my rock of refuge, where I can always go. Give the command to save me, for You are my rock and my fortress.
4 ULB ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು. BSB BSB: Deliver me, O my God, from the hand of the wicked, from the grasp of the unjust and ruthless.
5 ULB ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ? BSB BSB: For You are my hope, O Lord GOD, my confidence from my youth.
6 ULB ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ. BSB BSB: I have leaned on You since birth; You pulled me from my mother’s womb. My praise is always for You.
7 ULB ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ. BSB BSB: I have become a portent to many, but You are my strong refuge.
8 ULB ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು. BSB BSB: My mouth is filled with Your praise and with Your splendor all day long.
9 ULB ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ. BSB BSB: Do not discard me in my old age; do not forsake me when my strength fails.
10 ULB ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ, BSB BSB: For my enemies speak against me, and those who lie in wait for my life conspire,
11 ULB <<ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ. BSB BSB: saying, “God has forsaken him; pursue him and seize him, for there is no one to rescue him.”
12 ULB ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು. BSB BSB: Be not far from me, O God. Hurry, O my God, to help me.
13 ULB ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ. BSB BSB: May the accusers of my soul be ashamed and consumed; may those who seek my harm be covered with scorn and disgrace.
14 ULB ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು. BSB BSB: But I will always hope and will praise You more and more.
15 ULB ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ. BSB BSB: My mouth will declare Your righteousness and Your salvation all day long, though I cannot know their full measure.
16 ULB ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು. BSB BSB: I will come in the strength of the Lord GOD; I will proclaim Your righteousness—Yours alone.
17 ULB ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ. BSB BSB: O God, You have taught me from my youth, and to this day I proclaim Your marvelous deeds.
18 ULB ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು. BSB BSB: Even when I am old and gray, do not forsake me, O God, until I proclaim Your power to the next generation, Your might to all who are to come.
19 ULB ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು? BSB BSB: Your righteousness reaches to the heavens, O God, You who have done great things. Who, O God, is like You?
20 ULB ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು. BSB BSB: Though You have shown me many troubles and misfortunes, You will revive me once again. Even from the depths of the earth You will bring me back up.
21 ULB ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು. BSB BSB: You will increase my honor and comfort me once again.
22 ULB ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. BSB BSB: So I will praise You with the harp for Your faithfulness, O my God; I will sing praise to You with the lyre, O Holy One of Israel.
23 ULB ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು. BSB BSB: When I sing praise to You my lips will shout for joy, along with my soul, which You have redeemed.
24 ULB ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು. BSB BSB: My tongue will indeed proclaim Your righteousness all day long, for those who seek my harm are disgraced and confounded.
Select verses for actions: Enter goes to them and Escape comes back.