1 ULB ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು. BSB BSB: Of Solomon. Endow the king with Your justice, O God, and the son of the king with Your righteousness.
2 ULB ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ. BSB BSB: May he judge Your people with righteousness and Your afflicted with justice.
3 ULB ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ. BSB BSB: May the mountains bring peace to the people, and the hills bring righteousness.
4 ULB ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ. BSB BSB: May he vindicate the afflicted among the people; may he save the children of the needy and crush the oppressor.
5 ULB ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವನು ಜೀವಿಸುವನು. BSB BSB: May they fear him as long as the sun shines, as long as the moon remains, through all generations.
6 ULB ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ. BSB BSB: May he be like rain that falls on freshly cut grass, like spring showers that water the earth.
7 ULB ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. BSB BSB: May the righteous flourish in his days and prosperity abound until the moon is no more.
8 ULB ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ. BSB BSB: May he rule from sea to sea, and from the Euphrates to the ends of the earth.
9 ULB ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ. BSB BSB: May the nomads bow before him, and his enemies lick the dust.
10 ULB ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. BSB BSB: May the kings of Tarshish and distant shores bring tribute; may the kings of Sheba and Seba offer gifts.
11 ULB ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ. BSB BSB: May all kings bow down to him and all nations serve him.
12 ULB ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. BSB BSB: For he will deliver the needy who cry out and the afflicted who have no helper.
13 ULB ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. BSB BSB: He will take pity on the poor and needy and save the lives of the oppressed.
14 ULB ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು. BSB BSB: He will redeem them from oppression and violence, for their blood is precious in his sight.
15 ULB ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ. BSB BSB: Long may he live! May gold from Sheba be given him. May people ever pray for him; may they bless him all day long.
16 ULB ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ. BSB BSB: May there be an abundance of grain in the land; may it sway atop the hills. May its fruit trees flourish like the forests of Lebanon, the people of its cities like the grass of the field.
17 ULB ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. BSB BSB: May his name endure forever; may his name continue as long as the sun shines. In him may all nations be blessed; may they call him blessed.
18 ULB ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. BSB BSB: Blessed be the LORD God, the God of Israel, who alone does marvelous deeds.
19 ULB ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್. BSB BSB: And blessed be His glorious name forever; may all the earth be filled with His glory. Amen and amen.
20 ULB ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ. BSB BSB: Thus conclude the prayers of David son of Jesse.
Select verses for actions: Enter goes to them and Escape comes back.