1 ULB ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು. BSB BSB: For the choirmaster. According to Jeduthun. A Psalm of Asaph. I cried out to God; I cried aloud to God to hear me.
2 ULB ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು. BSB BSB: In the day of trouble I sought the Lord; through the night my outstretched hands did not grow weary; my soul refused to be comforted.
3 ULB ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು. BSB BSB: I remembered You, O God, and I groaned; I mused and my spirit grew faint. Selah
4 ULB ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು. BSB BSB: You have kept my eyes from closing; I am too troubled to speak.
5 ULB ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು. BSB BSB: I considered the days of old, the years long in the past.
6 ULB ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ, BSB BSB: At night I remembered my song; in my heart I mused, and my spirit pondered:
7 ULB <<ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ? BSB BSB: “Will the Lord spurn us forever and never show His favor again?
8 ULB ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? BSB BSB: Is His loving devotion gone forever? Has His promise failed for all time?
9 ULB ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?>> ಎಂದು ಅಂದುಕೊಂಡೆನು ಸೆಲಾ BSB BSB: Has God forgotten to be gracious? Has His anger shut off His compassion?” Selah
10 ULB ಪುನಃ ನಾನು, <<ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು. BSB BSB: So I said, “I am grieved that the right hand of the Most High has changed.”
11 ULB ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು. BSB BSB: I will remember the works of the LORD; yes, I will remember Your wonders of old.
12 ULB ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು>> ಅಂದುಕೊಂಡೆನು. BSB BSB: I will reflect on all You have done and ponder Your mighty deeds.
13 ULB ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು? BSB BSB: Your way, O God, is holy. What god is so great as our God?
14 ULB ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ. BSB BSB: You are the God who works wonders; You display Your strength among the peoples.
15 ULB ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. ಸೆಲಾ BSB BSB: With power You redeemed Your people, the sons of Jacob and Joseph. Selah
16 ULB ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು. BSB BSB: The waters saw You, O God; the waters saw You and swirled; even the depths were shaken.
17 ULB ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು. BSB BSB: The clouds poured down water; the skies resounded with thunder; Your arrows flashed back and forth.
18 ULB ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು. BSB BSB: Your thunder resounded in the whirlwind; the lightning lit up the world; the earth trembled and quaked.
19 ULB ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ. BSB BSB: Your path led through the sea, Your way through the mighty waters, but Your footprints were not to be found.
20 ULB ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ. BSB BSB: You led Your people like a flock by the hand of Moses and Aaron.
Select verses for actions: Enter goes to them and Escape comes back.