1 ULB ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ. BSB BSB: A Maskil of Asaph. Give ear, O my people, to my instruction; listen to the words of my mouth.
2 ULB ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು. BSB BSB: I will open my mouth in parables; I will utter things hidden from the beginning,
3 ULB ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ, BSB BSB: that we have heard and known and our fathers have relayed to us.
4 ULB ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು. BSB BSB: We will not hide them from their children but will declare to the next generation the praises of the LORD and His might and the wonders He has performed.
5 ULB ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, <<ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ; BSB BSB: For He established a testimony in Jacob and appointed a law in Israel, which He commanded our fathers to teach to their children,
6 ULB ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು. BSB BSB: that the coming generation would know them—even children yet to be born—to arise and tell their own children
7 ULB ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ, BSB BSB: that they should put their confidence in God, not forgetting His works, but keeping His commandments.
8 ULB ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು>> ಎಂಬುದೇ. BSB BSB: Then they will not be like their fathers, a stubborn and rebellious generation, whose heart was not loyal, whose spirit was not faithful to God.
9 ULB ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು. BSB BSB: The archers of Ephraim turned back on the day of battle.
10 ULB ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ. BSB BSB: They failed to keep God’s covenant and refused to live by His law.
11 ULB ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು. BSB BSB: They forgot what He had done, the wonders He had shown them.
12 ULB ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು. BSB BSB: He worked wonders before their fathers in the land of Egypt, in the region of Zoan.
13 ULB ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು. BSB BSB: He split the sea and brought them through; He set the waters upright like a wall.
14 ULB ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು. BSB BSB: He led them with a cloud by day and with a light of fire all night.
15 ULB ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು. BSB BSB: He split the rocks in the wilderness and gave them drink as abundant as the seas.
16 ULB ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು. BSB BSB: He brought streams from the stone and made water flow down like rivers.
17 ULB ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು. BSB BSB: But they continued to sin against Him, rebelling in the desert against the Most High.
18 ULB ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು. BSB BSB: They willfully tested God by demanding the food they craved.
19 ULB ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, <<ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? BSB BSB: They spoke against God, saying, “Can God really prepare a table in the wilderness?
20 ULB ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ>> ಎಂಬುದೇ. BSB BSB: When He struck the rock, water gushed out and torrents raged. But can He also give bread or supply His people with meat?”
21 ULB ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ, BSB BSB: Therefore the LORD heard and was filled with wrath; so a fire was kindled against Jacob, and His anger flared against Israel,
22 ULB ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು. BSB BSB: because they did not believe God or rely on His salvation.
23 ULB ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು, BSB BSB: Yet He commanded the clouds above and opened the doors of the heavens.
24 ULB ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು. BSB BSB: He rained down manna for them to eat; He gave them grain from heaven.
25 ULB ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು. BSB BSB: Man ate the bread of angels; He sent them food in abundance.
26 ULB ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು, BSB BSB: He stirred the east wind from the heavens and drove the south wind by His might.
27 ULB ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು. BSB BSB: He rained meat on them like dust, and winged birds like the sand of the sea.
28 ULB ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು. BSB BSB: He felled them in the midst of their camp, all around their dwellings.
29 ULB ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು. BSB BSB: So they ate and were well filled, for He gave them what they craved.
30 ULB ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ, BSB BSB: Yet before they had filled their desire, with the food still in their mouths,
31 ULB ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು. BSB BSB: God’s anger flared against them, and He put to death their strongest and subdued the young men of Israel.
32 ULB ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು. BSB BSB: In spite of all this, they kept on sinning; despite His wonderful works, they did not believe.
33 ULB ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು. BSB BSB: So He ended their days in futility, and their years in sudden terror.
34 ULB ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ, BSB BSB: When He slew them, they would seek Him; they repented and searched for God.
35 ULB ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು. BSB BSB: And they remembered that God was their Rock, that God Most High was their Redeemer.
36 ULB ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು. BSB BSB: But they deceived Him with their mouths, and lied to Him with their tongues.
37 ULB ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ. BSB BSB: Their hearts were disloyal to Him, and they were unfaithful to His covenant.
38 ULB ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು. BSB BSB: And yet He was compassionate; He forgave their iniquity and did not destroy them. He often restrained His anger and did not unleash His full wrath.
39 ULB ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು. BSB BSB: He remembered that they were but flesh, a passing breeze that does not return.
40 ULB ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು. BSB BSB: How often they disobeyed Him in the wilderness and grieved Him in the desert!
41 ULB ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು. BSB BSB: Again and again they tested God and provoked the Holy One of Israel.
42 ULB ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ, BSB BSB: They did not remember His power—the day He redeemed them from the adversary,
43 ULB ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು. BSB BSB: when He performed His signs in Egypt and His wonders in the fields of Zoan.
44 ULB ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು. BSB BSB: He turned their rivers to blood, and from their streams they could not drink.
45 ULB ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು. BSB BSB: He sent swarms of flies that devoured them, and frogs that devastated them.
46 ULB ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು. BSB BSB: He gave their crops to the grasshopper, the fruit of their labor to the locust.
47 ULB ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು. BSB BSB: He killed their vines with hailstones and their sycamore-figs with sleet.
48 ULB ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು. BSB BSB: He abandoned their cattle to the hail and their livestock to bolts of lightning.
49 ULB ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು. BSB BSB: He unleashed His fury against them, wrath, indignation, and calamity—a band of destroying angels.
50 ULB ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು. BSB BSB: He cleared a path for His anger; He did not spare them from death but delivered their lives to the plague.
51 ULB ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು. BSB BSB: He struck all the firstborn of Egypt, the virility in the tents of Ham.
52 ULB ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು. BSB BSB: He led out His people like sheep and guided them like a flock in the wilderness.
53 ULB ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು; BSB BSB: He led them safely, so they did not fear, but the sea engulfed their enemies.
54 ULB ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು. BSB BSB: He brought them to His holy land, to the mountain His right hand had acquired.
55 ULB ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು. BSB BSB: He drove out nations before them and apportioned their inheritance; He settled the tribes of Israel in their tents.
56 ULB ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ, BSB BSB: But they tested and disobeyed God Most High, for they did not keep His decrees.
57 ULB ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು. BSB BSB: They turned back and were faithless like their fathers, twisted like a faulty bow.
58 ULB ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು. BSB BSB: They enraged Him with their high places and provoked His jealousy with their idols.
59 ULB ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು. BSB BSB: On hearing it, God was furious and rejected Israel completely.
60 ULB ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು, BSB BSB: He abandoned the tabernacle of Shiloh, the tent He had pitched among men.
61 ULB ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು. BSB BSB: He delivered His strength to captivity, and His splendor to the hand of the adversary.
62 ULB ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು. BSB BSB: He surrendered His people to the sword because He was enraged by His heritage.
63 ULB ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ. BSB BSB: Fire consumed His young men, and their maidens were left without wedding songs.
64 ULB ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ. BSB BSB: His priests fell by the sword, but their widows could not lament.
65 ULB ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು, BSB BSB: Then the Lord awoke as from sleep, like a mighty warrior overcome by wine.
66 ULB ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು. BSB BSB: He beat back His foes; He put them to everlasting shame.
67 ULB ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ, BSB BSB: He rejected the tent of Joseph and refused the tribe of Ephraim.
68 ULB ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು. BSB BSB: But He chose the tribe of Judah, Mount Zion, which He loved.
69 ULB ಆತನು ತನ್ನ ಆಲಯವನ್ನು ಪರ್ವತದಂತೆಯೂ, ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು. BSB BSB: He built His sanctuary like the heights, like the earth He has established forever.
70 ULB ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು, BSB BSB: He chose David His servant and took him from the sheepfolds;
71 ULB ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು. BSB BSB: from tending the ewes He brought him to be shepherd of His people Jacob, of Israel His inheritance.
72 ULB ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು. BSB BSB: So David shepherded them with integrity of heart and guided them with skillful hands.
Select verses for actions: Enter goes to them and Escape comes back.