1 ULB ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು. BSB BSB: A Psalm of Asaph. The nations, O God, have invaded Your inheritance; they have defiled Your holy temple and reduced Jerusalem to rubble.
2 ULB ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು. BSB BSB: They have given the corpses of Your servants as food to the birds of the air, the flesh of Your saints to the beasts of the earth.
3 ULB ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ. BSB BSB: They have poured out their blood like water all around Jerusalem, and there is no one to bury the dead.
4 ULB ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು. BSB BSB: We have become a reproach to our neighbors, a scorn and derision to those around us.
5 ULB ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ? BSB BSB: How long, O LORD? Will You be angry forever? Will Your jealousy burn like fire?
6 ULB ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು. BSB BSB: Pour out Your wrath on the nations that do not acknowledge You, on the kingdoms that refuse to call on Your name,
7 ULB ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ. BSB BSB: for they have devoured Jacob and devastated his homeland.
8 ULB ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ. BSB BSB: Do not hold past sins against us; let Your compassion come quickly, for we are brought low.
9 ULB ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು. BSB BSB: Help us, O God of our salvation, for the glory of Your name; deliver us and atone for our sins, for the sake of Your name.
10 ULB ಮ್ಲೇಚ್ಛರು, <<ಅವರ ದೇವರು ಎಲ್ಲಿ?>> ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ. BSB BSB: Why should the nations ask, “Where is their God?” Before our eyes, make known among the nations Your vengeance for the bloodshed of Your servants.
11 ULB ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು. BSB BSB: May the groans of the captives reach You; by the strength of Your arm preserve those condemned to death.
12 ULB ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು. BSB BSB: Pay back into the laps of our neighbors sevenfold the reproach they hurled at You, O Lord.
13 ULB ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು. BSB BSB: Then we Your people, the sheep of Your pasture, will thank You forever; from generation to generation we will declare Your praise.
Select verses for actions: Enter goes to them and Escape comes back.