1 ULB ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು. BSB BSB: For the choirmaster. To the tune of “The Lilies of the Covenant.” A Psalm of Asaph. Hear us, O Shepherd of Israel, who leads Joseph like a flock; You who sit enthroned between the cherubim, shine forth
2 ULB ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು. BSB BSB: before Ephraim, Benjamin, and Manasseh. Rally Your mighty power and come to save us.
3 ULB ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. BSB BSB: Restore us, O God, and cause Your face to shine upon us, that we may be saved.
4 ULB ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ? BSB BSB: O LORD God of Hosts, how long will Your anger smolder against the prayers of Your people?
5 ULB ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ. BSB BSB: You fed them with the bread of tears and made them drink the full measure of their tears.
6 ULB ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ. BSB BSB: You make us contend with our neighbors; our enemies mock us.
7 ULB ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. BSB BSB: Restore us, O God of Hosts, and cause Your face to shine upon us, that we may be saved.
8 ULB ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ. BSB BSB: You uprooted a vine from Egypt; You drove out the nations and transplanted it.
9 ULB ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು. BSB BSB: You cleared the ground for it, and it took root and filled the land.
10 ULB ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು. BSB BSB: The mountains were covered by its shade, and the mighty cedars with its branches.
11 ULB ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು. BSB BSB: It sent out its branches to the Sea, and its shoots toward the River.
12 ULB ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ. BSB BSB: Why have You broken down its walls, so that all who pass by pick its fruit?
13 ULB ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ. BSB BSB: The boar from the forest ravages it, and the creatures of the field feed upon it.
14 ULB ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು. BSB BSB: Return, O God of Hosts, we pray! Look down from heaven and see! Attend to this vine—
15 ULB ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು. BSB BSB: the root Your right hand has planted, the son You have raised up for Yourself.
16 ULB ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ. BSB BSB: Your vine has been cut down and burned; they perish at the rebuke of Your countenance.
17 ULB ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು. BSB BSB: Let Your hand be upon the man at Your right hand, on the son of man You have raised up for Yourself.
18 ULB ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು. BSB BSB: Then we will not turn away from You; revive us, and we will call on Your name.
19 ULB ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. BSB BSB: Restore us, O LORD God of Hosts; cause Your face to shine upon us, that we may be saved.
Select verses for actions: Enter goes to them and Escape comes back.