1 ULB ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ. BSB BSB: A song. A Psalm of Asaph. O God, be not silent; be not speechless; be not still, O God.
2 ULB ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ. BSB BSB: See how Your enemies rage, how Your foes have reared their heads.
3 ULB ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ, BSB BSB: With cunning they scheme against Your people and conspire against those You cherish,
4 ULB <<ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ>> ಅಂದುಕೊಳ್ಳುತ್ತಾರೆ. BSB BSB: saying, “Come, let us erase them as a nation; may the name of Israel be remembered no more.”
5 ULB ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು, BSB BSB: For with one mind they plot together; they form an alliance against You—
6 ULB ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು, BSB BSB: the tents of Edom and the Ishmaelites, of Moab and the Hagrites,
7 ULB ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ; BSB BSB: of Gebal, Ammon, and Amalek, of Philistia with the people of Tyre.
8 ULB ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ BSB BSB: Even Assyria has joined them, lending strength to the sons of Lot. Selah
9 ULB ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು. BSB BSB: Do to them as You did to Midian, as to Sisera and Jabin at the River Kishon,
10 ULB ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ. BSB BSB: who perished at Endor and became like dung on the ground.
11 ULB ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ. BSB BSB: Make their nobles like Oreb and Zeeb, and all their princes like Zebah and Zalmunna,
12 ULB ಅವರು <<ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ>> ಅಂದುಕೊಳ್ಳುತ್ತಾರಲ್ಲಾ. BSB BSB: who said, “Let us possess for ourselves the pastures of God.”
13 ULB ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು. BSB BSB: Make them like tumbleweed, O my God, like chaff before the wind.
14 ULB ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು, BSB BSB: As fire consumes a forest, as a flame sets the mountains ablaze,
15 ULB ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು. BSB BSB: so pursue them with Your tempest, and terrify them with Your storm.
16 ULB ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು. BSB BSB: Cover their faces with shame, that they may seek Your name, O LORD.
17 ULB ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ. BSB BSB: May they be ever ashamed and terrified; may they perish in disgrace.
18 ULB ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು. BSB BSB: May they know that You alone, whose name is the LORD, are Most High over all the earth.
Select verses for actions: Enter goes to them and Escape comes back.