1 ULB ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! BSB BSB: For the choirmaster. According to Gittith. A Psalm of the sons of Korah. How lovely is Your dwelling place, O LORD of Hosts!
2 ULB ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. BSB BSB: My soul longs, even faints, for the courts of the LORD; my heart and my flesh cry out for the living God.
3 ULB ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! BSB BSB: Even the sparrow has found a home, and the swallow a nest for herself, where she places her young near Your altars, O LORD of Hosts, my King and my God.
4 ULB ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ BSB BSB: How blessed are those who dwell in Your house! They are ever praising You. Selah
5 ULB ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ, BSB BSB: Blessed are those whose strength is in You, whose hearts are set on pilgrimage.
6 ULB ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ. BSB BSB: As they pass through the Valley of Baca, they make it a place of springs; even the autumn rain covers it with pools.
7 ULB ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ, BSB BSB: They go from strength to strength, until each appears before God in Zion.
8 ULB <<ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು>> ಅನ್ನುತ್ತಾರೆ. ಸೆಲಾ BSB BSB: O LORD God of Hosts, hear my prayer; give ear, O God of Jacob. Selah
9 ULB ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು. BSB BSB: Take notice of our shield, O God, and look with favor on the face of Your anointed.
10 ULB ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು. BSB BSB: For better is one day in Your courts than a thousand elsewhere. I would rather be a doorkeeper in the house of my God than dwell in the tents of the wicked.
11 ULB ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ? BSB BSB: For the LORD God is a sun and a shield; the LORD gives grace and glory; He withholds no good thing from those who walk with integrity.
12 ULB ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. BSB BSB: O LORD of Hosts, how blessed is the man who trusts in You!
Select verses for actions: Enter goes to them and Escape comes back.