1 ULB ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ. BSB BSB: A prayer of David. Incline Your ear, O LORD, and answer me, for I am poor and needy.
2 ULB ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. BSB BSB: Preserve my soul, for I am godly. You are my God; save Your servant who trusts in You.
3 ULB ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ. BSB BSB: Be merciful to me, O Lord, for I call to You all day long.
4 ULB ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. BSB BSB: Bring joy to Your servant, for to You, O Lord, I lift up my soul.
5 ULB ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ. BSB BSB: For You, O Lord, are kind and forgiving, rich in loving devotion to all who call on You.
6 ULB ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. BSB BSB: Hear my prayer, O LORD, and attend to my plea for mercy.
7 ULB ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. BSB BSB: In the day of my distress I call on You, because You answer me.
8 ULB ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ. BSB BSB: O Lord, there is none like You among the gods, nor any works like Yours.
9 ULB ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. BSB BSB: All the nations You have made will come and bow before You, O Lord, and they will glorify Your name.
10 ULB ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು. BSB BSB: For You are great and perform wonders; You alone are God.
11 ULB ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು. BSB BSB: Teach me Your way, O LORD, that I may walk in Your truth. Give me an undivided heart, that I may fear Your name.
12 ULB ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು. BSB BSB: I will praise You, O Lord my God, with all my heart; I will glorify Your name forever.
13 ULB ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. BSB BSB: For great is Your loving devotion to me; You have delivered me from the depths of Sheol.
14 ULB ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ. BSB BSB: The arrogant rise against me, O God; a band of ruthless men seeks my life; they have no regard for You.
15 ULB ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು. BSB BSB: But You, O Lord, are a compassionate and gracious God, slow to anger, abounding in loving devotion and faithfulness.
16 ULB ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು. BSB BSB: Turn to me and have mercy; grant Your strength to Your servant; save the son of Your maidservant.
17 ULB ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, <<ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ>> ಎಂದು ನಾಚಿಕೆಪಡಲಿ. BSB BSB: Show me a sign of Your goodness, that my enemies may see and be ashamed; for You, O LORD, have helped me and comforted me.
Select verses for actions: Enter goes to them and Escape comes back.