1 ULB ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ. BSB BSB: A song. A Psalm of the sons of Korah. For the choirmaster. According to Mahalath Leannoth. A Maskil of Heman the Ezrahite. O LORD, the God of my salvation, day and night I cry out before You.
2 ULB ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ; ಕಿವಿಗೊಟ್ಟು ನನ್ನ ಕೂಗನ್ನು ಕೇಳು. BSB BSB: May my prayer come before You; incline Your ear to my cry.
3 ULB ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು. BSB BSB: For my soul is full of troubles, and my life draws near to Sheol.
4 ULB ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ. BSB BSB: I am counted among those descending to the Pit. I am like a man without strength.
5 ULB ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ. ಹತರಾದವರು ನಿನ್ನ ಪರಿಪಾಲನೆ ಇಲ್ಲದವರು; ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ. BSB BSB: I am forsaken among the dead, like the slain who lie in the grave, whom You remember no more, who are cut off from Your care.
6 ULB ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ. BSB BSB: You have laid me in the lowest Pit, in the darkest of the depths.
7 ULB ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದಿ. ಸೆಲಾ BSB BSB: Your wrath weighs heavily upon me; all Your waves have submerged me. Selah
8 ULB ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು. BSB BSB: You have removed my friends from me; You have made me repulsive to them; I am confined and cannot escape.
9 ULB ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ. BSB BSB: My eyes grow dim with grief. I call to You daily, O LORD; I spread out my hands to You.
10 ULB ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? ಸೆಲಾ BSB BSB: Do You work wonders for the dead? Do departed spirits rise up to praise You? Selah
11 ULB ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ? BSB BSB: Can Your loving devotion be proclaimed in the grave, Your faithfulness in Abaddon?
12 ULB ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ? BSB BSB: Will Your wonders be known in the darkness, or Your righteousness in the land of oblivion?
13 ULB ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು. BSB BSB: But to You, O LORD, I cry for help; in the morning my prayer comes before You.
14 ULB ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ? BSB BSB: Why, O LORD, do You reject me? Why do You hide Your face from me?
15 ULB ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ. BSB BSB: From my youth I was afflicted and near death. I have borne Your terrors; I am in despair.
16 ULB ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು. BSB BSB: Your wrath has swept over me; Your terrors have destroyed me.
17 ULB ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ; ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ. BSB BSB: All day long they engulf me like water; they enclose me on every side.
18 ULB ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ. BSB BSB: You have removed my beloved and my friend; darkness is my closest companion.
Select verses for actions: Enter goes to them and Escape comes back.