1 ULB ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. BSB BSB: For the choirmaster. To the tune of “The Death of the Son.” A Psalm of David. I will give thanks to the LORD with all my heart; I will recount all Your wonders.
2 ULB ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. BSB BSB: I will be glad and rejoice in You; I will sing praise to Your name, O Most High.
3 ULB ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. BSB BSB: When my enemies retreat, they stumble and perish before You.
4 ULB ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. BSB BSB: For You have upheld my just cause; You sit on Your throne judging righteously.
5 ULB ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. BSB BSB: You have rebuked the nations; You have destroyed the wicked; You have erased their name forever and ever.
6 ULB ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು. BSB BSB: The enemy has come to eternal ruin, and You have uprooted their cities; the very memory of them has vanished.
7 ULB ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. BSB BSB: But the LORD abides forever; He has established His throne for judgment.
8 ULB ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. BSB BSB: He judges the world with justice; He governs the people with equity.
9 ULB ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. BSB BSB: The LORD is a refuge for the oppressed, a stronghold in times of trouble.
10 ULB ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. BSB BSB: Those who know Your name trust in You, for You, O LORD, have not forsaken those who seek You.
11 ULB ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. BSB BSB: Sing praises to the LORD, who dwells in Zion; proclaim His deeds among the nations.
12 ULB ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. BSB BSB: For the Avenger of bloodshed remembers; He does not ignore the cry of the afflicted.
13 ULB ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. BSB BSB: Be merciful to me, O LORD; see how my enemies afflict me! Lift me up from the gates of death,
14 ULB ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. BSB BSB: that I may declare all Your praises—that within the gates of Daughter Zion I may rejoice in Your salvation.
15 ULB ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. BSB BSB: The nations have fallen into a pit of their making; their feet are caught in the net they have hidden.
16 ULB ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ BSB BSB: The LORD is known by the justice He brings; the wicked are ensnared by the work of their hands. Higgaion Selah
17 ULB ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. BSB BSB: The wicked will return to Sheol—all the nations who forget God.
18 ULB ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. BSB BSB: For the needy will not always be forgotten; nor the hope of the oppressed forever dashed.
19 ULB ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. BSB BSB: Rise up, O LORD, do not let man prevail; let the nations be judged in Your presence.
20 ULB ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ. BSB BSB: Lay terror upon them, O LORD; let the nations know they are but men. Selah
Select verses for actions: Enter goes to them and Escape comes back.