1 ULB ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು. BSB BSB: O LORD, God of vengeance, O God of vengeance, shine forth.
2 ULB ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು. BSB BSB: Rise up, O Judge of the earth; render a reward to the proud.
3 ULB ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು? BSB BSB: How long will the wicked, O LORD, how long will the wicked exult?
4 ULB ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ. BSB BSB: They pour out arrogant words; all workers of iniquity boast.
5 ULB ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ; BSB BSB: They crush Your people, O LORD; they oppress Your heritage.
6 ULB ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ. BSB BSB: They kill the widow and the foreigner; they murder the fatherless.
7 ULB ಅವರು, <<ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ>> ಅನ್ನುತ್ತಾರೆ. BSB BSB: They say, “The LORD does not see; the God of Jacob pays no heed.”
8 ULB ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ? BSB BSB: Take notice, O senseless among the people! O fools, when will you be wise?
9 ULB ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ? BSB BSB: He who affixed the ear, can He not hear? He who formed the eye, can He not see?
10 ULB ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ? BSB BSB: He who admonishes the nations, does He not discipline? He who teaches man, does He lack knowledge?
11 ULB ಮನುಷ್ಯನ ಯೋಚನೆಗಳು, <<ಉಸಿರೇ>> ಎಂದು ಯೆಹೋವನು ತಿಳುಕೊಳ್ಳುತ್ತಾನೆ. BSB BSB: The LORD knows the thoughts of man, that they are futile.
12 ULB ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು. BSB BSB: Blessed is the man You discipline, O LORD, and teach from Your law,
13 ULB ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ. BSB BSB: to grant him relief from days of trouble, until a pit is dug for the wicked.
14 ULB ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ. BSB BSB: For the LORD will not forsake His people; He will never abandon His heritage.
15 ULB ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು. BSB BSB: Surely judgment will again be righteous, and all the upright in heart will follow it.
16 ULB ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು? BSB BSB: Who will rise up for me against the wicked? Who will stand for me against the workers of iniquity?
17 ULB ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. BSB BSB: Unless the LORD had been my helper, I would soon have dwelt in the abode of silence.
18 ULB ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು. BSB BSB: If I say, “My foot is slipping,” Your loving devotion, O LORD, supports me.
19 ULB ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ. BSB BSB: When anxiety overwhelms me, Your consolation delights my soul.
20 ULB ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು? BSB BSB: Can a corrupt throne be Your ally—one devising mischief by decree?
21 ULB ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ. BSB BSB: They band together against the righteous and condemn the innocent to death.
22 ULB ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ. BSB BSB: But the LORD has been my stronghold, and my God is my rock of refuge.
23 ULB ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು. BSB BSB: He will bring upon them their own iniquity and destroy them for their wickedness. The LORD our God will destroy them.
Select verses for actions: Enter goes to them and Escape comes back.