1 ULB ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. BSB BSB: Sing to the LORD a new song; sing to the LORD, all the earth.
2 ULB ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. BSB BSB: Sing to the LORD, bless His name; proclaim His salvation day after day.
3 ULB ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. BSB BSB: Declare His glory among the nations, His wonders among all peoples.
4 ULB ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. BSB BSB: For great is the LORD, and greatly to be praised; He is to be feared above all gods.
5 ULB ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು. BSB BSB: For all the gods of the nations are idols, but it is the LORD who made the heavens.
6 ULB ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ. BSB BSB: Splendor and majesty are before Him; strength and beauty fill His sanctuary.
7 ULB ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ. BSB BSB: Ascribe to the LORD, O families of the nations, ascribe to the LORD glory and strength.
8 ULB ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. BSB BSB: Ascribe to the LORD the glory due His name; bring an offering and enter His courts.
9 ULB ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ. BSB BSB: Worship the LORD in the splendor of His holiness; tremble before Him, all the earth.
10 ULB ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. BSB BSB: Declare among the nations: “The LORD reigns!” The world is firmly established; it cannot be moved; He will judge the peoples with equity.
11 ULB ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. BSB BSB: Let the heavens be glad and the earth rejoice; let the sea resound, and all that fills it.
12 ULB ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. BSB BSB: Let the fields exult, and all that is in them. Then all the trees of the forest will sing for joy
13 ULB ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು. BSB BSB: before the LORD, for He is coming—He is coming to judge the earth. He will judge the world in righteousness and the peoples in His faithfulness.
Select verses for actions: Enter goes to them and Escape comes back.