Psalm 98 98 Psalms Book 4 Kannada Unlocked Literal Bible 1 ULB ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. BSB BSB: A Psalm. Sing to the LORD a new song, for He has done wonders; His right hand and holy arm have gained Him the victory.
2 ULB ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. BSB BSB: The LORD has proclaimed His salvation and revealed His righteousness to the nations.
3 ULB ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. BSB BSB: He has remembered His love and faithfulness to the house of Israel; all the ends of the earth have seen the salvation of our God.
4 ULB ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. BSB BSB: Make a joyful noise to the LORD, all the earth; break forth—let your cry ring out, and sing praises!
5 ULB ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. BSB BSB: Sing praises to the LORD with the lyre, in melodious song with the harp.
6 ULB ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ. BSB BSB: With trumpets and the blast of the ram’s horn shout for joy before the LORD, the King.
7 ULB ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. BSB BSB: Let the sea resound, and all that fills it, the world, and all who dwell in it.
8 ULB ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. BSB BSB: Let the rivers clap their hands, let the mountains sing together for joy
9 ULB ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು. BSB BSB: before the LORD, for He comes to judge the earth. He will judge the world with righteousness and the peoples with equity.
Select verses for actions: Enter goes to them and Escape comes back.
Chapter complete
You’ve read Psalm 98
Make Opened yours A free account keeps your place, highlights and notes on every device. Add Plus to ask Study Help about Psalm 98, and keep Opened free for readers who can’t pay.