1 ULB ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು. BSB BSB: This is the revelation of Jesus Christ, which God gave Him to show His servants what must soon come to pass. He made it known by sending His angel to His servant John,
2 ULB ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು. BSB BSB: who testifies to everything he saw. This is the word of God and the testimony of Jesus Christ.
3 ULB ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ. BSB BSB: Blessed is the one who reads aloud the words of this prophecy, and blessed are those who hear and obey what is written in it, because the time is near.
4 ULB ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ BSB BSB: John, To the seven churches in the province of Asia: Grace and peace to you from Him who is and was and is to come, and from the seven spirits before His throne,
5 ULB ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, BSB BSB: and from Jesus Christ, the faithful witness, the firstborn from the dead, and the ruler of the kings of the earth. To Him who loves us and has released us from our sins by His blood,
6 ULB ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. BSB BSB: who has made us to be a kingdom, priests to His God and Father—to Him be the glory and power forever and ever! Amen.
7 ULB ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್. BSB BSB: Behold, He is coming with the clouds, and every eye will see Him—even those who pierced Him. And all the tribes of the earth will mourn because of Him. So shall it be! Amen.
8 ULB <<ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ>> ಎಂದು ದೇವರಾದ ಕರ್ತನು ಹೇಳುತ್ತಾನೆ. BSB BSB: “I am the Alpha and the Omega,” says the Lord God, who is and was and is to come—the Almighty.
9 ULB ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು. BSB BSB: I, John, your brother and partner in the tribulation and kingdom and perseverance that are in Jesus, was on the island of Patmos because of the word of God and my testimony about Jesus.
10 ULB ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು. BSB BSB: On the Lord’s day I was in the Spirit, and I heard behind me a loud voice like a trumpet,
11 ULB ಅದು, <<ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು>> ಎಂದು ನುಡಿಯಿತು. BSB BSB: saying, “Write on a scroll what you see and send it to the seven churches: to Ephesus, Smyrna, Pergamum, Thyatira, Sardis, Philadelphia, and Laodicea.”
12 ULB ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ BSB BSB: Then I turned to see the voice that was speaking with me. And having turned, I saw seven golden lampstands,
13 ULB ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. BSB BSB: and among the lampstands was One like the Son of Man, dressed in a long robe, with a golden sash around His chest.
14 ULB ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ, BSB BSB: The hair of His head was white like wool, as white as snow, and His eyes were like a blazing fire.
15 ULB ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. BSB BSB: His feet were like polished bronze refined in a furnace, and His voice was like the roar of many waters.
16 ULB ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು. BSB BSB: He held in His right hand seven stars, and a sharp double-edged sword came from His mouth. His face was like the sun shining at its brightest.
17 ULB ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, <<ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ, BSB BSB: When I saw Him, I fell at His feet like a dead man. But He placed His right hand on me and said, “Do not be afraid. I am the First and the Last,
18 ULB ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. BSB BSB: the Living One. I was dead, and behold, now I am alive forever and ever! And I hold the keys of Death and of Hades.
19 ULB ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ. BSB BSB: Therefore write down the things you have seen, the things that are, and the things that will happen after this.
20 ULB ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.>> BSB BSB: This is the mystery of the seven stars you saw in My right hand and of the seven golden lampstands: The seven stars are the angels of the seven churches, and the seven lampstands are the seven churches.
Select verses for actions: Enter goes to them and Escape comes back.