2 ULB ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು. BSB BSB: And I heard a sound from heaven like the roar of many waters and the loud rumbling of thunder. And the sound I heard was like harpists strumming their harps.
3 ULB ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. BSB BSB: And they sang a new song before the throne and before the four living creatures and the elders. And no one could learn the song except the 144,000 who had been redeemed from the earth.
5 ULB ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ. BSB BSB: And no lie was found in their mouths; they are blameless.
6 ULB ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. BSB BSB: Then I saw another angel flying overhead, with the eternal gospel to proclaim to those who dwell on the earth—to every nation and tribe and tongue and people.
7 ULB ಆ ದೂತನು, <<ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ>> ಎಂದು ಮಹಾಧ್ವನಿಯಿಂದ ಹೇಳಿದನು. BSB BSB: And he said in a loud voice, “Fear God and give Him glory, because the hour of His judgment has come. Worship the One who made the heavens and the earth and the sea and the springs of waters.”
8 ULB ಅವನ ಹಿಂದೆ ಎರಡನೆಯ ದೇವದೂತನು ಬಂದು, <<ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು>> ಎಂದು ಹೇಳಿದನು. BSB BSB: Then a second angel followed, saying, “Fallen, fallen is Babylon the great, who has made all the nations drink the wine of the passion of her immorality.”
9 ULB ಅವನ ಹಿಂದೆ ಮೂರನೆಯ ದೇವದೂತನು ಬಂದು, <<ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ, BSB BSB: And a third angel followed them, calling out in a loud voice, “If anyone worships the beast and its image and receives its mark on his forehead or on his hand,
10 ULB ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. BSB BSB: he too will drink the wine of God’s anger, poured undiluted into the cup of His wrath. And he will be tormented in fire and sulfur in the presence of the holy angels and of the Lamb.
11 ULB ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು>> ಎಂದು ಮಹಾಶಬ್ದದಿಂದ ಹೇಳಿದನು. BSB BSB: And the smoke of their torment rises forever and ever. Day and night there is no rest for those who worship the beast and its image, or for anyone who receives the mark of its name.”
12 ULB ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ. BSB BSB: Here is a call for the perseverance of the saints, who keep the commandments of God and the faith of Jesus.
13 ULB ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, <<ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ>> ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, <<ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ>> ಎಂದು ಹೇಳುತ್ತಾನೆ. BSB BSB: And I heard a voice from heaven telling me to write, “Blessed are the dead—those who die in the Lord from this moment on.” “Yes,” says the Spirit, “they will rest from their labors, for their deeds will follow them.”
14 ULB ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು. BSB BSB: And I looked and saw a white cloud, and seated on the cloud was One like the Son of Man, with a golden crown on His head and a sharp sickle in His hand.
15 ULB ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, <<ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ>> ಎಂದು ಮಹಾಧ್ವನಿಯಿಂದ ಕೂಗಿದನು. BSB BSB: Then another angel came out of the temple, crying out in a loud voice to the One seated on the cloud, “Swing Your sickle and reap, because the time has come to harvest, for the crop of the earth is ripe.”
16 ULB ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. BSB BSB: So the One seated on the cloud swung His sickle over the earth, and the earth was harvested.
17 ULB ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. BSB BSB: Then another angel came out of the temple in heaven, and he too had a sharp sickle.
18 ULB ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, <<ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೆಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ>> ಎಂದು ಮಹಾಧ್ವನಿಯಿಂದ ಕೂಗಿದನು. BSB BSB: Still another angel, with authority over the fire, came from the altar and called out in a loud voice to the angel with the sharp sickle, “Swing your sharp sickle and gather the clusters of grapes from the vine of the earth, because its grapes are ripe.”
19 ULB ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು. BSB BSB: So the angel swung his sickle over the earth and gathered the grapes of the earth, and he threw them into the great winepress of God’s wrath.
20 ULB ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು. BSB BSB: And the winepress was trodden outside the city, and the blood that flowed from it rose as high as the bridles of the horses for a distance of 1,600 stadia.
Select verses for actions: Enter goes to them and Escape comes back.