1 ULB ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, <<ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ>> ಎಂದು ಹೇಳಿತು. BSB BSB: Then I heard a loud voice from the temple saying to the seven angels, “Go, pour out on the earth the seven bowls of God’s wrath.”
2 ULB ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು. BSB BSB: So the first angel went and poured out his bowl on the earth, and loathsome, malignant sores broke out on those who had the mark of the beast and worshiped its image.
3 ULB ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು. BSB BSB: And the second angel poured out his bowl into the sea, and it turned to blood like that of the dead, and every living thing in the sea died.
4 ULB ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು. BSB BSB: And the third angel poured out his bowl into the rivers and springs of water, and they turned to blood.
5 ULB ಆ ಮೇಲೆ ಜಲಾಧಿಪತಿಯಾದ ದೂತನು, <<ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. BSB BSB: And I heard the angel of the waters say: “Righteous are You, O Holy One, who is and was, because You have brought these judgments.
6 ULB ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.>> ಎಂದು ಹೇಳುವುದನ್ನು ಕೇಳಿದೆನು. BSB BSB: For they have spilled the blood of saints and prophets, and You have given them blood to drink, as they deserve.”
7 ULB ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, <<ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ>> ಎಂದು ಹೇಳುವುದನ್ನು ಕೇಳಿದೆನು. BSB BSB: And I heard the altar reply: “Yes, Lord God Almighty, true and just are Your judgments.”
8 ULB ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು. BSB BSB: Then the fourth angel poured out his bowl on the sun, and it was given power to scorch the people with fire.
9 ULB ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ. BSB BSB: And the people were scorched by intense heat, and they cursed the name of God, who had authority over these plagues. Yet they did not repent and give Him glory.
10 ULB ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು, BSB BSB: And the fifth angel poured out his bowl on the throne of the beast, and its kingdom was plunged into darkness, and men began to gnaw their tongues in anguish
11 ULB ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ. BSB BSB: and curse the God of heaven for their pains and sores. Yet they did not repent of their deeds.
12 ULB ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು. BSB BSB: And the sixth angel poured out his bowl on the great river Euphrates, and its water was dried up to prepare the way for the kings of the East.
13 ULB ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು. BSB BSB: And I saw three unclean spirits that looked like frogs coming out of the mouths of the dragon, the beast, and the false prophet.
14 ULB ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು. BSB BSB: These are demonic spirits that perform signs and go out to all the kings of the earth, to assemble them for battle on the great day of God the Almighty.
15 ULB <<ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.>> BSB BSB: “Behold, I am coming like a thief. Blessed is the one who remains awake and clothed, so that he will not go naked and let his shame be exposed.”
16 ULB ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು. BSB BSB: And they assembled the kings in the place that in Hebrew is called Armageddon.
17 ULB ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ <<ಸಂಭವಿಸಿ ಆಯಿತು>> ಎಂದು ಹೇಳಿತು. BSB BSB: Then the seventh angel poured out his bowl into the air, and a loud voice came from the throne in the temple, saying, “It is done!”
18 ULB ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. BSB BSB: And there were flashes of lightning, rumblings, peals of thunder, and a great earthquake the likes of which had not occurred since men were upon the earth—so mighty was the great quake.
19 ULB ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು. BSB BSB: The great city was split into three parts, and the cities of the nations collapsed. And God remembered Babylon the great and gave her the cup of the wine of the fury of His wrath.
20 ULB ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು. BSB BSB: Then every island fled, and no mountain could be found.
21 ULB ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು. BSB BSB: And great hailstones weighing almost a hundred pounds each rained down on them from above. And men cursed God for the plague of hail, because it was so horrendous.
Select verses for actions: Enter goes to them and Escape comes back.