1 ULB ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು,<< ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ. BSB BSB: After this I heard a sound like the roar of a great multitude in heaven, shouting: “Hallelujah! Salvation and glory and power belong to our God!
2 ULB ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.>> ಎಂದು ಹೇಳಿ, BSB BSB: For His judgments are true and just. He has judged the great prostitute who corrupted the earth with her immorality. He has avenged the blood of His servants that was poured out by her hand.”
3 ULB ಎರಡನೆಯ ಸಾರಿ, <<ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ>> ಎಂದು ಹೇಳಿದರು. BSB BSB: And a second time they called out: “Hallelujah! Her smoke rises forever and ever.”
4 ULB ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, <<ಆಮೆನ್, ಹಲ್ಲೆಲೂಯಾ>> ಎಂದರು. BSB BSB: And the twenty-four elders and the four living creatures fell down and worshiped God who sits on the throne, saying: “Amen, Hallelujah!”
5 ULB ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, <<ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ>> ಎಂದು ಹೇಳಿತು. BSB BSB: Then a voice came from the throne, saying: “Praise our God, all you who serve Him, and those who fear Him, small and great alike!”
6 ULB ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, <<ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ. BSB BSB: And I heard a sound like the roar of a great multitude, like the rushing of many waters, and like a mighty rumbling of thunder, crying out: “Hallelujah! For the Lord our God the Almighty reigns.
8 ULB ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ). BSB BSB: She was given clothing of fine linen, bright and pure.” For the fine linen she wears is the righteous acts of the saints.
9 ULB ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, <<ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ>> ಎಂದು ನನಗೆ ಹೇಳಿ, <<ಈ ಮಾತುಗಳು ದೇವರ ಸತ್ಯವಚನಗಳಾಗಿವೆ>> ಅಂದನು. BSB BSB: Then the angel told me to write, “Blessed are those who are invited to the marriage supper of the Lamb.” And he said to me, “These are the true words of God.”
10 ULB ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, <<ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ>> ಎಂದು ಹೇಳಿದನು. BSB BSB: So I fell at his feet to worship him. But he told me, “Do not do that! I am a fellow servant with you and your brothers who rely on the testimony of Jesus. Worship God! For the testimony of Jesus is the spirit of prophecy.”
11 ULB ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ. BSB BSB: Then I saw heaven standing open, and there before me was a white horse. And its rider is called Faithful and True. With righteousness He judges and wages war.
12 ULB ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. BSB BSB: He has eyes like blazing fire, and many royal crowns on His head. He has a name written on Him that only He Himself knows.
13 ULB ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು. BSB BSB: He is dressed in a robe dipped in blood, and His name is The Word of God.
14 ULB ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು. BSB BSB: The armies of heaven, dressed in fine linen, white and pure, follow Him on white horses.
15 ULB ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು. BSB BSB: And from His mouth proceeds a sharp sword with which to strike down the nations, and He will rule them with an iron scepter. He treads the winepress of the fury of the wrath of God the Almighty.
16 ULB ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ<< ರಾಜಾಧಿರಾಜನೂ ಕರ್ತಾಧಿ ಕರ್ತನೂ>> ಎಂಬ ಹೆಸರು ಬರೆದಿದೆ. BSB BSB: And He has a name written on His robe and on His thigh: KING OF KINGS AND LORD OF LORDS.
17 ULB ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, <<ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ, BSB BSB: Then I saw an angel standing in the sun, and he cried out in a loud voice to all the birds flying overhead, “Come, gather together for the great supper of God,
18 ULB ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ>> ಎಂದು ಹೇಳಿದನು. BSB BSB: so that you may eat the flesh of kings and commanders and mighty men, of horses and riders, of everyone slave and free, small and great.”
19 ULB ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು. BSB BSB: Then I saw the beast and the kings of the earth with their armies assembled to wage war against the One seated on the horse, and against His army.
20 ULB ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು. BSB BSB: But the beast was captured along with the false prophet, who on its behalf had performed signs deceiving those who had the mark of the beast and worshiped its image. Both the beast and the false prophet were thrown alive into the fiery lake of burning sulfur.
21 ULB ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು. BSB BSB: And the rest were killed with the sword that proceeded from the mouth of the One seated on the horse. And all the birds gorged themselves on their flesh.
Select verses for actions: Enter goes to them and Escape comes back.