2 ULB ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. BSB BSB: I saw the holy city, the new Jerusalem, coming down out of heaven from God, prepared as a bride adorned for her husband.
5 ULB ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, <<ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ>> ಎಂದನು. ಮತ್ತು ಒಬ್ಬನು ನನಗೆ, <<ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ>> ಎಂದು ಹೇಳಿದನು. BSB BSB: And the One seated on the throne said, “Behold, I make all things new.” Then He said, “Write this down, for these words are faithful and true.”
6 ULB ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, <<ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. BSB BSB: And He told me, “It is done! I am the Alpha and the Omega, the Beginning and the End. To the thirsty I will give freely from the spring of the water of life.
7 ULB ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು. BSB BSB: The one who overcomes will inherit all things, and I will be his God, and he will be My son.
8 ULB ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು>> ಎಂದು ನನಗೆ ಹೇಳಿದನು. BSB BSB: But to the cowardly and unbelieving and abominable and murderers and sexually immoral and sorcerers and idolaters and all liars, their place will be in the lake that burns with fire and sulfur. This is the second death.”
9 ULB ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, <<ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು>> ಎಂದು ಹೇಳಿ, BSB BSB: Then one of the seven angels with the seven bowls full of the seven final plagues came and said to me, “Come, I will show you the bride, the wife of the Lamb.”
10 ULB ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. BSB BSB: And he carried me away in the Spirit to a mountain great and high, and showed me the holy city of Jerusalem coming down out of heaven from God,
11 ULB ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. BSB BSB: shining with the glory of God. Its radiance was like a most precious jewel, like a jasper, as clear as crystal.
12 ULB ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. BSB BSB: The city had a great and high wall with twelve gates inscribed with the names of the twelve tribes of Israel, and twelve angels at the gates.
13 ULB ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. BSB BSB: There were three gates on the east, three on the north, three on the south, and three on the west.
14 ULB ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. BSB BSB: The wall of the city had twelve foundations bearing the names of the twelve apostles of the Lamb.
15 ULB ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. BSB BSB: The angel who spoke with me had a golden measuring rod to measure the city and its gates and walls.
16 ULB ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2200 ಕಿಲೊಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು. BSB BSB: The city lies foursquare, with its width the same as its length. And he measured the city with the rod, and all its dimensions were equal—12,000 stadia in length and width and height.
17 ULB ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಾಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ. BSB BSB: And he measured its wall to be 144 cubits, by the human measure the angel was using.
18 ULB ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. BSB BSB: The wall was made of jasper, and the city itself of pure gold, as pure as glass.
19 ULB ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೇಯದು ಪದ್ಮರಾಗ, BSB BSB: The foundations of the city walls were adorned with every kind of precious stone: The first foundation was jasper, the second sapphire, the third chalcedony, the fourth emerald,
20 ULB ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ, BSB BSB: the fifth sardonyx, the sixth carnelian, the seventh chrysolite, the eighth beryl, the ninth topaz, the tenth chrysoprase, the eleventh jacinth, and the twelfth amethyst.
21 ULB ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. BSB BSB: And the twelve gates were twelve pearls, with each gate consisting of a single pearl. The main street of the city was pure gold, as clear as glass.
22 ULB ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ. BSB BSB: But I saw no temple in the city, because the Lord God Almighty and the Lamb are its temple.
23 ULB ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು. BSB BSB: And the city has no need of sun or moon to shine on it, because the glory of God illuminates the city, and the Lamb is its lamp.
24 ULB ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು. BSB BSB: By its light the nations will walk, and into it the kings of the earth will bring their glory.
25 ULB ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ. BSB BSB: Its gates will never be shut at the end of the day, because there will be no night there.
26 ULB ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. BSB BSB: And into the city will be brought the glory and honor of the nations.
27 ULB ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು. BSB BSB: But nothing unclean will ever enter it, nor anyone who practices an abomination or a lie, but only those whose names are written in the Lamb’s Book of Life.
Select verses for actions: Enter goes to them and Escape comes back.