1 ULB ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. BSB BSB: Then the fifth angel sounded his trumpet, and I saw a star that had fallen from heaven to earth, and it was given the key to the pit of the Abyss.
2 ULB ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಾಗಿ ಹೋದವು. BSB BSB: The star opened the pit of the Abyss, and smoke rose out of it like the smoke of a great furnace, and the sun and the air were darkened by the smoke from the pit.
3 ULB ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಇರುವ ಶಕ್ತಿಯ ಪ್ರಕಾರ ಅವುಗಳಿಗೆ ಶಕ್ತಿಯು ಕೊಡಲ್ಪಟ್ಟಿತು. BSB BSB: And out of the smoke, locusts descended on the earth, and they were given power like that of the scorpions of the earth.
4 ULB ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು. BSB BSB: They were told not to harm the grass of the earth or any plant or tree, but only those who did not have the seal of God on their foreheads.
5 ULB ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. BSB BSB: The locusts were not given power to kill them, but only to torment them for five months, and their torment was like the stinging of a scorpion.
6 ULB ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. BSB BSB: In those days men will seek death and will not find it; they will long to die, but death will escape them.
7 ULB ಆ ಮಿಡಿತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು. BSB BSB: And the locusts looked like horses prepared for battle, with something like crowns of gold on their heads; and their faces were like the faces of men.
8 ULB ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು. BSB BSB: They had hair like that of women, and teeth like those of lions.
9 ULB ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು. BSB BSB: They also had breastplates like breastplates of iron, and the sound of their wings was like the roar of many horses and chariots rushing into battle.
10 ULB ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. BSB BSB: They had tails with stingers like scorpions, which had the power to injure people for five months.
11 ULB ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. BSB BSB: They were ruled by a king, the angel of the Abyss. His name in Hebrew is Abaddon, and in Greek it is Apollyon.
12 ULB ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. BSB BSB: The first woe has passed. Behold, two woes are still to follow.
13 ULB ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. BSB BSB: Then the sixth angel sounded his trumpet, and I heard a voice from the four horns of the golden altar before God
14 ULB ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, <<ಯೂಫ್ರಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು>> ಎಂದು ಹೇಳಿತು. BSB BSB: saying to the sixth angel with the trumpet, “Release the four angels who are bound at the great river Euphrates.”
15 ULB ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. BSB BSB: So the four angels who had been prepared for this hour and day and month and year were released to kill a third of mankind.
16 ULB ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು. BSB BSB: And the number of mounted troops was two hundred million; I heard their number.
17 ULB ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು. BSB BSB: Now the horses and riders in my vision looked like this: The riders had breastplates the colors of fire, sapphire, and sulfur. The heads of the horses were like the heads of lions, and out of their mouths proceeded fire, smoke, and sulfur.
18 ULB ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು. BSB BSB: A third of mankind was killed by the three plagues of fire, smoke, and sulfur that proceeded from their mouths.
19 ULB ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು. BSB BSB: For the power of the horses was in their mouths and in their tails; indeed, their tails were like snakes, having heads with which to inflict harm.
20 ULB ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. BSB BSB: Now the rest of mankind who were not killed by these plagues still did not repent of the works of their hands. They did not stop worshiping demons and idols of gold, silver, bronze, stone, and wood, which cannot see or hear or walk.
21 ULB ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ. BSB BSB: Furthermore, they did not repent of their murder, sorcery, sexual immorality, and theft.
Select verses for actions: Enter goes to them and Escape comes back.