1 ULB ಆದ್ದರಿಂದ ಪ್ರಿಯರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. BSB BSB: Therefore I urge you, brothers, on account of God’s mercy, to offer your bodies as living sacrifices, holy and pleasing to God, which is your spiritual service of worship.
2 ULB ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. BSB BSB: Do not be conformed to this world, but be transformed by the renewing of your mind. Then you will be able to test and approve what is the good, pleasing, and perfect will of God.
3 ULB ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು. BSB BSB: For by the grace given me I say to every one of you: Do not think of yourself more highly than you ought, but think of yourself with sober judgment, according to the measure of faith God has given you.
4 ULB ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ BSB BSB: Just as each of us has one body with many members, and not all members have the same function,
5 ULB ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ. BSB BSB: so in Christ we who are many are one body, and each member belongs to one another.
6 ULB ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ. BSB BSB: We have different gifts according to the grace given us. If one’s gift is prophecy, let him use it in proportion to his faith;
7 ULB ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ. BSB BSB: if it is serving, let him serve; if it is teaching, let him teach;
8 ULB ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ. BSB BSB: if it is encouraging, let him encourage; if it is giving, let him give generously; if it is leading, let him lead with diligence; if it is showing mercy, let him do it cheerfully.
9 ULB ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. BSB BSB: Love must be sincere. Detest what is evil; cling to what is good.
10 ULB ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ. BSB BSB: Be devoted to one another in brotherly love. Outdo yourselves in honoring one another.
11 ULB ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ. BSB BSB: Do not let your zeal subside; keep your spiritual fervor, serving the Lord.
12 ULB ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ. BSB BSB: Be joyful in hope, patient in affliction, persistent in prayer.
13 ULB ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ. BSB BSB: Share with the saints who are in need. Practice hospitality.
15 ULB ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ. BSB BSB: Rejoice with those who rejoice; weep with those who weep.
16 ULB ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. BSB BSB: Live in harmony with one another. Do not be proud, but associate with the lowly. Do not be conceited.
18 ULB ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ. BSB BSB: If it is possible on your part, live at peace with everyone.
20 ULB ಹಾಗಾದರೆ <<ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು>>. BSB BSB: On the contrary, “If your enemy is hungry, feed him; if he is thirsty, give him a drink. For in so doing, you will heap burning coals on his head.”
21 ULB ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಗೆಲ್ಲಿರಿ. BSB BSB: Do not be overcome by evil, but overcome evil with good.
Select verses for actions: Enter goes to them and Escape comes back.