2 ULB ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು. BSB BSB: Welcome her in the Lord in a manner worthy of the saints, and assist her with anything she may need from you. For she has been a great help to many people, including me.
3 ULB ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. BSB BSB: Greet Prisca and Aquila, my fellow workers in Christ Jesus,
4 ULB ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ. BSB BSB: who have risked their lives for me. Not only I but all the churches of the Gentiles are grateful to them.
5 ULB ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ. BSB BSB: Greet also the church that meets at their house. Greet my beloved Epenetus, who was the first convert to Christ in the province of Asia.
6 ULB ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. BSB BSB: Greet Mary, who has worked very hard for you.
7 ULB ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು. BSB BSB: Greet Andronicus and Junia, my fellow countrymen and fellow prisoners. They are outstanding among the apostles, and they were in Christ before I was.
8 ULB ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ. BSB BSB: Greet Ampliatus, my beloved in the Lord.
9 ULB ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. BSB BSB: Greet Urbanus, our fellow worker in Christ, and my beloved Stachys.
10 ULB ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. BSB BSB: Greet Apelles, who is approved in Christ. Greet those who belong to the household of Aristobulus.
11 ULB ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು. BSB BSB: Greet Herodion, my fellow countryman. Greet those from the household of Narcissus who are in the Lord.
12 ULB ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ. BSB BSB: Greet Tryphena and Tryphosa, women who have worked hard in the Lord. Greet my beloved Persis, who has worked very hard in the Lord.
13 ULB ಕರ್ತನಲ್ಲಿ ಆರಿಸಿಕೊಳ್ಳಲ್ಪಟ್ಟವನಾದ ರೂಫನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು. BSB BSB: Greet Rufus, chosen in the Lord, and his mother, who has been a mother to me as well.
14 ULB ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು. BSB BSB: Greet Asyncritus, Phlegon, Hermes, Patrobas, Hermas, and the brothers with them.
15 ULB ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು. BSB BSB: Greet Philologus and Julia, Nereus and his sister, and Olympas and all the saints with them.
16 ULB ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ. BSB BSB: Greet one another with a holy kiss. All the churches of Christ send you greetings.
17 ULB ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. BSB BSB: Now I urge you, brothers, to watch out for those who create divisions and obstacles that are contrary to the teaching you have learned. Turn away from them.
18 ULB ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. BSB BSB: For such people are not serving our Lord Christ, but their own appetites. By smooth talk and flattery they deceive the hearts of the naive.
19 ULB ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ. BSB BSB: Everyone has heard about your obedience, so I rejoice over you. But I want you to be wise about what is good and innocent about what is evil.
20 ULB ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. BSB BSB: The God of peace will soon crush Satan under your feet. The grace of our Lord Jesus Christ be with you.
21 ULB ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ BSB BSB: Timothy, my fellow worker, sends you greetings, as do Lucius, Jason, and Sosipater, my fellow countrymen.
22 ULB ಈ ಪತ್ರಿಕೆಯನ್ನು ಬರೆದ ತೆರ್ತ್ಯಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. BSB BSB: I, Tertius, who wrote down this letter, greet you in the Lord.
24 ULB ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್. BSB BSB: Not in the BSB
25 ULB ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, BSB BSB: Now to Him who is able to strengthen you by my gospel and by the proclamation of Jesus Christ, according to the revelation of the mystery concealed for ages past
27 ULB ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್. BSB BSB: to the only wise God be glory forever through Jesus Christ! Amen.
Select verses for actions: Enter goes to them and Escape comes back.