2 ULB ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು. BSB BSB: I have deep sorrow and unceasing anguish in my heart.
3 ULB ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ. BSB BSB: For I could wish that I myself were cursed and cut off from Christ for the sake of my brothers, my own flesh and blood,
5 ULB ಅವರ ಪೂರ್ವಪಿತೃಗಳು ಇವರಿಗೆ ಸಂಬಂದಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. BSB BSB: Theirs are the patriarchs, and from them proceeds the human descent of Christ, who is God over all, forever worthy of praise! Amen.
6 ULB ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ. BSB BSB: It is not as though God’s word has failed. For not all who are descended from Israel are Israel.
7 ULB ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ <<ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.>> ಎಂದು ದೇವರು ಹೇಳಿದನು. BSB BSB: Nor because they are Abraham’s descendants are they all his children. On the contrary, “Through Isaac your offspring will be reckoned.”
8 ULB ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು. BSB BSB: So it is not the children of the flesh who are God’s children, but it is the children of the promise who are regarded as offspring.
9 ULB <<ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು>> ಎಂಬ ವಾಗ್ದಾನವಾಗಿದೆ. BSB BSB: For this is what the promise stated: “At the appointed time I will return, and Sarah will have a son.”
10 ULB ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು. BSB BSB: Not only that, but Rebecca’s children were conceived by one man, our father Isaac.
11 ULB ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ <<ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ>> ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ. BSB BSB: Yet before the twins were born or had done anything good or bad, in order that God’s plan of election might stand,
13 ULB ಇದಕ್ಕನುಸಾರವಾಗಿ <<ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು>> ಎಂದು ಬರೆದದೆ. BSB BSB: So it is written: “Jacob I loved, but Esau I hated.”
14 ULB ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ. BSB BSB: What then shall we say? Is God unjust? Certainly not!
15 ULB <<ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು>> ಎಂದು ದೇವರು ಮೋಶೆಗೆ ಹೇಳಿರುತ್ತಾನೆ. BSB BSB: For He says to Moses: “I will have mercy on whom I have mercy, and I will have compassion on whom I have compassion.”
16 ULB ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ. BSB BSB: So then, it does not depend on man’s desire or effort, but on God’s mercy.
17 ULB ದೇವರು ಫರೋಹನನನ್ನು ಕುರಿತು <<ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ>> ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ. BSB BSB: For the Scripture says to Pharaoh: “I raised you up for this very purpose, that I might display My power in you, and that My name might be proclaimed in all the earth.”
18 ULB ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ. BSB BSB: Therefore God has mercy on whom He wants to have mercy, and He hardens whom He wants to harden.
19 ULB <<ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ>> ಎಂದು ನೀನು ನನ್ನನ್ನು ಕೇಳುವಿ. BSB BSB: One of you will say to me, “Then why does God still find fault? For who can resist His will?”
20 ULB ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, <<ಏಕೆ ನನ್ನನ್ನು ಹೀಗೆ ರೂಪಿಸಿದೆ>>, ಎಂದು ಕೇಳುವುದುಂಟೇ? BSB BSB: But who are you, O man, to talk back to God? Shall what is formed say to Him who formed it, “Why did You make me like this?”
21 ULB ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? BSB BSB: Does not the potter have the right to make from the same lump of clay one vessel for special occasions and another for common use?
22 ULB ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ. BSB BSB: What if God, intending to show His wrath and make His power known, bore with great patience the vessels of His wrath, prepared for destruction?
23 ULB ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ. BSB BSB: What if He did this to make the riches of His glory known to the vessels of His mercy, whom He prepared in advance for glory—
24 ULB ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು. BSB BSB: including us, whom He has called not only from the Jews, but also from the Gentiles?
26 ULB ಮತ್ತು ಯಾವ ಸ್ಥಳದಲ್ಲಿ <ನೀವು ನನ್ನ ಜನರಲ್ಲವೆಂದು> ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು <ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು>>> ಎಂಬುದೇ. BSB BSB: and, “It will happen that in the very place where it was said to them, ‘You are not My people,’ they will be called ‘sons of the living God.’”
27 ULB ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: <<ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು>> <<ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು>> ಎಂದು ಕೂಗಿ ಹೇಳುತ್ತಾನೆ. BSB BSB: Isaiah cries out concerning Israel: “Though the number of the Israelites is like the sand of the sea, only the remnant will be saved.
28 ULB ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ, BSB BSB: For the Lord will carry out His sentence on the earth thoroughly and decisively.”
29 ULB <<ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ <<ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು>> ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ. BSB BSB: It is just as Isaiah foretold: “Unless the Lord of Hosts had left us descendants, we would have become like Sodom, we would have resembled Gomorrah.”
30 ULB ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು. BSB BSB: What then will we say? That the Gentiles, who did not pursue righteousness, have obtained it, a righteousness that is by faith;
31 ULB ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು. BSB BSB: but Israel, who pursued a law of righteousness, has not attained it.
32 ULB ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ, BSB BSB: Why not? Because their pursuit was not by faith, but as if it were by works. They stumbled over the stumbling stone,
33 ULB ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, <<ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ>> ಎಂಬುದೇ. BSB BSB: as it is written: “See, I lay in Zion a stone of stumbling and a rock of offense; and the one who believes in Him will never be put to shame.”
Select verses for actions: Enter goes to them and Escape comes back.