1 ULB ಸೊಲೊಮೋನನು ರಚಿಸಿದ ಪರಮಗೀತೆ. BSB BSB: This is Solomon’s Song of Songs.
2 ULB ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. BSB BSB: Let him kiss me with the kisses of his mouth! For your love is more delightful than wine.
3 ULB ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು. BSB BSB: The fragrance of your perfume is pleasing; your name is like perfume poured out. No wonder the maidens adore you.
4 ULB ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು. BSB BSB: Take me away with you—let us hurry! May the king bring me to his chambers. We will rejoice and delight in you; we will praise your love more than wine. It is only right that they adore you.
5 ULB ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ. BSB BSB: I am dark, yet lovely, O daughters of Jerusalem, like the tents of Kedar, like the curtains of Solomon.
6 ULB ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ. BSB BSB: Do not stare because I am dark, for the sun has gazed upon me. My mother’s sons were angry with me; they made me a keeper of the vineyards, but my own vineyard I have neglected.
7 ULB ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು? BSB BSB: Tell me, O one I love, where do you pasture your sheep? Where do you rest them at midday? Why should I be like a veiled woman beside the flocks of your companions?
8 ULB ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು. BSB BSB: If you do not know, O fairest of women, follow the tracks of the flock, and graze your young goats near the tents of the shepherds.
9 ULB ಪ್ರಿಯಳೇ, ನಿನ್ನನ್ನು ಫರೋಹನ ರಥವನ್ನೆಳೆವ ಹೆಣ್ಣು ಕುದುರೆಗೆ ಹೋಲಿಸಿದ್ದೇನೆ. BSB BSB: I compare you, my darling, to a mare among Pharaoh’s chariots.
10 ULB ನಿನ್ನ ಕೆನ್ನೆಗಳು ಆಭರಣಗಳಿಂದಲೂ, ನಿನ್ನ ಕಂಠವು ಹಾರಗಳಿಂದಲೂ ಎಷ್ಟೋ ಅಂದವಾಗಿವೆ! BSB BSB: Your cheeks are beautiful with ornaments, your neck with strings of jewels.
11 ULB ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿರುವ, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು. BSB BSB: We will make you ornaments of gold, studded with beads of silver.
12 ULB ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು. BSB BSB: While the king was at his table, my perfume spread its fragrance.
13 ULB ಎನ್ನಿನಿಯನು ಪ್ರಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ; BSB BSB: My beloved is to me a sachet of myrrh resting between my breasts.
14 ULB ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು. BSB BSB: My beloved is to me a cluster of henna blossoms in the vineyards of En-gedi.
15 ULB ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ. BSB BSB: How beautiful you are, my darling! Oh, how very beautiful! Your eyes are like doves.
16 ULB ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ, BSB BSB: How handsome you are, my beloved! Oh, how delightful! The soft grass is our bed.
17 ULB ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ. BSB BSB: The beams of our house are cedars; our rafters are fragrant firs.
Select verses for actions: Enter goes to them and Escape comes back.