1 ULB ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ. BSB BSB: I am a rose of Sharon, a lily of the valley.
2 ULB ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು. BSB BSB: Like a lily among the thorns is my darling among the maidens.
3 ULB ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು. BSB BSB: Like an apple tree among the trees of the forest is my beloved among the young men. I delight to sit in his shade, and his fruit is sweet to my taste.
4 ULB ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ. BSB BSB: He has brought me to the house of wine, and his banner over me is love.
5 ULB ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ. BSB BSB: Sustain me with raisins; refresh me with apples, for I am faint with love.
6 ULB ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ, ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ! BSB BSB: His left hand is under my head, and his right arm embraces me.
7 ULB ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. BSB BSB: O daughters of Jerusalem, I adjure you by the gazelles and does of the field: Do not arouse or awaken love until the time is right.
8 ULB ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ; BSB BSB: Listen! My beloved approaches. Look! Here he comes, leaping across the mountains, bounding over the hills.
9 ULB ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ! BSB BSB: My beloved is like a gazelle or a young stag. Look, he stands behind our wall, gazing through the windows, peering through the lattice.
10 ULB ನನ್ನ ನಲ್ಲನು ನನಗೆ ಹೀಗೆಂದನು, <<ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ! BSB BSB: My beloved calls to me, “Arise, my darling. Come away with me, my beautiful one.
11 ULB ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು; BSB BSB: For now the winter is past; the rain is over and gone.
12 ULB ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ; BSB BSB: The flowers have appeared in the countryside; the season of singing has come, and the cooing of turtledoves is heard in our land.
13 ULB ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ! BSB BSB: The fig tree ripens its figs; the blossoming vines spread their fragrance. Arise, come away, my darling; come away with me, my beautiful one.”
14 ULB ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.>> BSB BSB: O my dove in the clefts of the rock, in the crevices of the cliff, let me see your face, let me hear your voice; for your voice is sweet, and your countenance is lovely.
15 ULB ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು. BSB BSB: Catch for us the foxes—the little foxes that ruin the vineyards—for our vineyards are in bloom.
16 ULB ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ. BSB BSB: My beloved is mine and I am his; he pastures his flock among the lilies.
17 ULB ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು. BSB BSB: Before the day breaks and shadows flee, turn, my beloved, and be like a gazelle or a young stag on the mountains of Bether.
Select verses for actions: Enter goes to them and Escape comes back.