1 ULB ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದಿಂದ ಇಳಿದು ಹೋಗುವ ಆಡಿನ ಮಂದೆ. BSB BSB: How beautiful you are, my darling—how very beautiful! Your eyes are like doves behind your veil. Your hair is like a flock of goats streaming down Mount Gilead.
2 ULB ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ. BSB BSB: Your teeth are like a flock of newly shorn sheep coming up from the washing; each has its twin, and not one of them is lost.
3 ULB ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ. BSB BSB: Your lips are like a scarlet ribbon, and your mouth is lovely. Your brow behind your veil is like a slice of pomegranate.
4 ULB ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ. BSB BSB: Your neck is like the tower of David, built with rows of stones; on it hang a thousand shields, all of them shields of warriors.
5 ULB ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ. BSB BSB: Your breasts are like two fawns, twins of a gazelle grazing among the lilies.
6 ULB ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು. BSB BSB: Before the day breaks and the shadows flee, I will make my way to the mountain of myrrh and to the hill of frankincense.
7 ULB ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ. BSB BSB: You are altogether beautiful, my darling; in you there is no flaw.
8 ULB ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ. BSB BSB: Come with me from Lebanon, my bride, come with me from Lebanon! Descend from the peak of Amana, from the summits of Senir and Hermon, from the dens of the lions, from the mountains of the leopards.
9 ULB ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ. BSB BSB: You have captured my heart, my sister, my bride; you have stolen my heart with one glance of your eyes, with one jewel of your neck.
10 ULB ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ! BSB BSB: How delightful is your love, my sister, my bride! Your love is much better than wine, and the fragrance of your perfume than all spices.
11 ULB ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ. BSB BSB: Your lips, my bride, drip sweetness like the honeycomb; honey and milk are under your tongue, and the fragrance of your garments is like the aroma of Lebanon.
12 ULB ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ. BSB BSB: My sister, my bride, you are a garden locked up, a spring enclosed, a fountain sealed.
13 ULB ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು, BSB BSB: Your branches are an orchard of pomegranates with the choicest of fruits, with henna and nard,
14 ULB ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ. BSB BSB: with nard and saffron, with calamus and cinnamon, with every kind of frankincense tree, with myrrh and aloes, with all the finest spices.
15 ULB ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ. BSB BSB: You are a garden spring, a well of fresh water flowing down from Lebanon.
16 ULB ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ. BSB BSB: Awake, O north wind, and come, O south wind. Breathe on my garden and spread the fragrance of its spices. Let my beloved come into his garden and taste its choicest fruits.
Select verses for actions: Enter goes to them and Escape comes back.