1 ULB ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ. BSB BSB: I have come to my garden, my sister, my bride; I have gathered my myrrh with my spice. I have eaten my honeycomb with my honey; I have drunk my wine with my milk. Eat, O friends, and drink; drink freely, O beloved.
2 ULB ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, <<ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ>> ಅಂದನು. BSB BSB: I sleep, but my heart is awake. A sound! My beloved is knocking: “Open to me, my sister, my darling, my dove, my flawless one. My head is drenched with dew, my hair with the dampness of the night.”
3 ULB <<ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?>> ಎಂದು ನಾನು ಅಂದುಕೊಂಡಾಗ, BSB BSB: I have taken off my robe—must I put it back on? I have washed my feet—must I soil them again?
4 ULB ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು. BSB BSB: My beloved put his hand to the latch; my heart pounded for him.
5 ULB ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು. BSB BSB: I rose up to open for my beloved. My hands dripped with myrrh, my fingers with flowing myrrh on the handles of the bolt.
6 ULB ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ. BSB BSB: I opened for my beloved, but he had turned and gone. My heart sank at his departure. I sought him but did not find him. I called, but he did not answer.
7 ULB ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು. BSB BSB: I encountered the watchmen on their rounds of the city. They beat me and bruised me; they took away my cloak, those guardians of the walls.
8 ULB ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. BSB BSB: O daughters of Jerusalem, I adjure you, if you find my beloved, tell him I am sick with love.
9 ULB ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು? BSB BSB: How is your beloved better than others, O most beautiful among women? How is your beloved better than another, that you charge us so?
10 ULB ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು. BSB BSB: My beloved is dazzling and ruddy, outstanding among ten thousand.
11 ULB ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ. BSB BSB: His head is purest gold; his hair is wavy and black as a raven.
12 ULB ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ. BSB BSB: His eyes are like doves beside the streams of water, bathed in milk and mounted like jewels.
13 ULB ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ. BSB BSB: His cheeks are like beds of spice, towers of perfume. His lips are like lilies, dripping with flowing myrrh.
14 ULB ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ. BSB BSB: His arms are rods of gold set with beryl. His body is polished ivory bedecked with sapphires.
15 ULB ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ. BSB BSB: His legs are pillars of marble set on bases of pure gold. His appearance is like Lebanon, as majestic as the cedars.
Select verses for actions: Enter goes to them and Escape comes back.