1 ULB ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ. BSB BSB: How beautiful are your sandaled feet, O daughter of the prince! The curves of your thighs are like jewels, the handiwork of a master.
2 ULB ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ. BSB BSB: Your navel is a rounded goblet; it never lacks blended wine. Your waist is a mound of wheat encircled by the lilies.
3 ULB ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ. BSB BSB: Your breasts are like two fawns, twins of a gazelle.
4 ULB ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ. BSB BSB: Your neck is like a tower made of ivory; your eyes are like the pools of Heshbon by the gate of Bath-rabbim; your nose is like the tower of Lebanon, facing toward Damascus.
5 ULB ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ. BSB BSB: Your head crowns you like Mount Carmel, the hair of your head like purple threads; the king is captured in your tresses.
6 ULB ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ! BSB BSB: How fair and pleasant you are, O love, with your delights!
7 ULB ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು. BSB BSB: Your stature is like a palm tree; your breasts are clusters of fruit.
8 ULB ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು. BSB BSB: I said, “I will climb the palm tree; I will take hold of its fruit.” May your breasts be like clusters of the vine, the fragrance of your breath like apples,
9 ULB ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು. BSB BSB: and your mouth like the finest wine. May it flow smoothly to my beloved, gliding gently over lips and teeth.
10 ULB ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ. BSB BSB: I belong to my beloved, and his desire is for me.
11 ULB ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ! BSB BSB: Come, my beloved, let us go to the countryside; let us spend the night among the wildflowers.
12 ULB ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು. BSB BSB: Let us go early to the vineyards to see if the vine has budded, if the blossom has opened, if the pomegranates are in bloom—there I will give you my love.
13 ULB ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ. BSB BSB: The mandrakes send forth a fragrance, and at our door is every delicacy, new as well as old, that I have treasured up for you, my beloved.
Select verses for actions: Enter goes to them and Escape comes back.