1 ULB ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ. BSB BSB: O that you were to me like a brother who nursed at my mother’s breasts! If I found you outdoors, I would kiss you, and no one would despise me.
2 ULB ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು. BSB BSB: I would lead you and bring you to the house of my mother who taught me. I would give you spiced wine to drink, the nectar of my pomegranates.
3 ULB ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು. BSB BSB: His left hand is under my head, and his right arm embraces me.
4 ULB ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. BSB BSB: O daughters of Jerusalem, I adjure you: Do not arouse or awaken love until the time is right.
5 ULB ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು. BSB BSB: Who is this coming up from the wilderness, leaning on her beloved? I roused you under the apple tree; there your mother conceived you; there she travailed and brought you forth.
7 ULB ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ. BSB BSB: Mighty waters cannot quench love; rivers cannot sweep it away. If a man were to give all the wealth of his house for love, his offer would be utterly scorned.
8 ULB ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ? BSB BSB: We have a little sister, and her breasts are not yet grown. What shall we do for our sister on the day she is spoken for?
9 ULB ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು. BSB BSB: If she is a wall, we will build a tower of silver upon her. If she is a door, we will enclose her with panels of cedar.
10 ULB ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು. BSB BSB: I am a wall, and my breasts are like towers. So I have become in his eyes like one who brings peace.
11 ULB ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು. BSB BSB: Solomon had a vineyard in Baal-hamon. He leased it to the tenants. For its fruit, each was to bring a thousand shekels of silver.
12 ULB ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ. BSB BSB: But my own vineyard is mine to give; the thousand shekels are for you, O Solomon, and two hundred are for those who tend its fruit.
13 ULB ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ. BSB BSB: You who dwell in the gardens, my companions are listening for your voice. Let me hear it!
14 ULB ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ. BSB BSB: Come away, my beloved, and be like a gazelle or a young stag on the mountains of spices.
Select verses for actions: Enter goes to them and Escape comes back.