1 ULB ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು. BSB BSB: In the eighth month of the second year of Darius, the word of the LORD came to the prophet Zechariah son of Berechiah, the son of Iddo, saying:
2 ULB ಅದೇನೆಂದರೆ, <<ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ. BSB BSB: “The LORD was very angry with your fathers.
3 ULB ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, <ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ>>> ಇದು ಸೇನಾಧೀಶ್ವರನಾದ ಯೆಹೋವನ ನುಡಿ, <<ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. BSB BSB: So tell the people that this is what the LORD of Hosts says: ‘Return to Me, declares the LORD of Hosts, and I will return to you, says the LORD of Hosts.’
4 ULB ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, <<ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, <ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ> ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ>> ಇದು ಯೆಹೋವನ ನುಡಿ. BSB BSB: Do not be like your fathers, to whom the former prophets proclaimed that this is what the LORD of Hosts says: ‘Turn now from your evil ways and deeds.’ But they did not listen or pay attention to Me, declares the LORD.
5 ULB <<ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ? BSB BSB: Where are your fathers now? And the prophets, do they live forever?
6 ULB ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ <ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ>>> ಅಂದುಕೊಂಡರು. BSB BSB: But did not My words and My statutes, which I commanded My servants the prophets, overtake your fathers? They repented and said, ‘Just as the LORD of Hosts purposed to do to us according to our ways and deeds, so He has done to us.’”
7 ULB ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು, BSB BSB: On the twenty-fourth day of the eleventh month, the month of Shebat, in the second year of Darius, the word of the LORD came to the prophet Zechariah son of Berechiah, the son of Iddo.
8 ULB <<ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು. BSB BSB: I looked out into the night and saw a man riding on a red horse. He was standing among the myrtle trees in the hollow, and behind him were red, sorrel, and white horses.
9 ULB ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, <ಸ್ವಾಮಿ ಇವರು ಯಾರು?>>> ಎಂದು ನಾನು ಕೇಳಲು ಆತನು ನನಗೆ, <<ಇವರು ಇಂಥವರೆಂದು ನಿನಗೆ ತೋರಿಸುವೆನು>> ಎಂಬುದಾಗಿ ಹೇಳಿದನು. BSB BSB: “What are these, my lord?” I asked. And the angel who was speaking with me replied, “I will show you what they are.”
10 ULB ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, <<ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು>> ಎಂದು ಉತ್ತರಕೊಟ್ಟನು. BSB BSB: Then the man standing among the myrtle trees explained, “They are the ones the LORD has sent to patrol the earth.”
11 ULB ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, <<ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ>> ಎಂದು ಅರಿಕೆಮಾಡಿದರು. BSB BSB: And the riders answered the angel of the LORD who was standing among the myrtle trees, “We have patrolled the earth, and behold, all the earth is at rest and tranquil.”
12 ULB ಇದನ್ನು ಕೇಳಿ ಯೆಹೋವನ ದೂತನು, <<ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ>> ಎಂದು ಬಿನ್ನವಿಸಲು, BSB BSB: Then the angel of the LORD said, “How long, O LORD of Hosts, will You withhold mercy from Jerusalem and the cities of Judah, with which You have been angry these seventy years?”
13 ULB ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು. BSB BSB: So the LORD spoke kind and comforting words to the angel who was speaking with me.
14 ULB ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, <<ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ> ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ. BSB BSB: Then the angel who was speaking with me said, “Proclaim this word: This is what the LORD of Hosts says: ‘I am very jealous for Jerusalem and Zion,
15 ULB ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.>> BSB BSB: but I am fiercely angry with the nations that are at ease. For I was a little angry, but they have added to the calamity.’
16 ULB ಹೀಗಿರಲು ಯೆಹೋವನು ಇಂತೆನ್ನುತ್ತಾನೆ, <<ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. BSB BSB: Therefore this is what the LORD says: ‘I will return to Jerusalem with mercy, and there My house will be rebuilt, declares the LORD of Hosts, and a measuring line will be stretched out over Jerusalem.’
17 ULB ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.>> BSB BSB: Proclaim further that this is what the LORD of Hosts says: ‘My cities will again overflow with prosperity; the LORD will again comfort Zion and choose Jerusalem.’”
18 ULB ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು. BSB BSB: Then I looked up and saw four horns.
19 ULB ವಿವರಿಸುವ ದೂತನನ್ನು ಕುರಿತು, <<ಇವು ಏನು?>> ಎಂದು ನಾನು ಕೇಳಿದ್ದಕ್ಕೆ ಅವನು, <<ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು>> ಎಂದು ಉತ್ತರಕೊಟ್ಟನು. BSB BSB: So I asked the angel who was speaking with me, “What are these?” And he told me, “These are the horns that have scattered Judah, Israel, and Jerusalem.”
20 ULB ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು. BSB BSB: Then the LORD showed me four craftsmen.
21 ULB ಆಗ ನಾನು, <<ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?>> ಎಂದು ಕೇಳಲು ಅವನು, <<ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡವುವುದಕ್ಕೆ ಬಂದಿದ್ದಾರೆ>> ಎಂದು ಹೇಳಿದನು. BSB BSB: “What are these coming to do?” I asked. And He replied, “These are the horns that scattered Judah so that no one could raise his head; but the craftsmen have come to terrify them and throw down these horns of the nations that have lifted up their horns against the land of Judah to scatter it.”