1 ULB ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ. BSB BSB: Ask the LORD for rain in springtime; the LORD makes the storm clouds, and He will give everyone showers of rain and crops in the field.
2 ULB ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ. BSB BSB: For idols speak deceit and diviners see illusions; they tell false dreams and offer empty comfort. Therefore the people wander like sheep, oppressed for lack of a shepherd.
3 ULB ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು. BSB BSB: “My anger burns against the shepherds, and I will punish the leaders. For the LORD of Hosts attends to His flock, the house of Judah; He will make them like His royal steed in battle.
4 ULB ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು. BSB BSB: The cornerstone will come from Judah, the tent peg from him, as well as the battle bow and every ruler together.
5 ULB ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು. BSB BSB: They will be like mighty men in battle, trampling the enemy in the mire of the streets. They will fight because the LORD is with them, and they will put the horsemen to shame.
6 ULB ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು. BSB BSB: I will strengthen the house of Judah and save the house of Joseph. I will restore them because I have compassion on them, and they will be as though I had not rejected them. For I am the LORD their God, and I will answer them.
7 ULB ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು. BSB BSB: Ephraim will be like a mighty man, and their hearts will be glad as with wine. Their children will see it and be joyful; their hearts will rejoice in the LORD.
8 ULB ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು. BSB BSB: I will whistle for them to gather, for I have redeemed them; and they will be as numerous as they once were.
9 ULB ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು. BSB BSB: Though I sow them among the nations, they will remember Me in distant lands; they and their children will live and return.
10 ULB ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು. BSB BSB: I will bring them back from Egypt and gather them from Assyria. I will bring them to Gilead and Lebanon until no more room is found for them.
11 ULB ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು. BSB BSB: They will pass through the sea of distress and strike the waves of the sea; all the depths of the Nile will dry up. The pride of Assyria will be brought down, and the scepter of Egypt will depart.
12 ULB ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ. BSB BSB: I will strengthen them in the LORD, and in His name they will walk,” declares the LORD.