1 ULB ಆಹಾ, ಚೀಯೋನೇ, ಯೆಹೋವನು ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು. BSB BSB: Behold, a day of the LORD is coming when your plunder will be divided in your presence.
2 ULB ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು. BSB BSB: For I will gather all the nations for battle against Jerusalem, and the city will be captured, the houses looted, and the women ravished. Half of the city will go into exile, but the rest of the people will not be removed from the city.
3 ULB ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು. BSB BSB: Then the LORD will go out to fight against those nations, as He fights in the day of battle.
4 ULB ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು. BSB BSB: On that day His feet will stand on the Mount of Olives, east of Jerusalem, and the Mount of Olives will be split in two from east to west, forming a great valley, with half the mountain moving to the north and half to the south.
6 ULB ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ, BSB BSB: On that day there will be no light, no cold or frost.
7 ULB ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು. BSB BSB: It will be a unique day known only to the LORD, without day or night; but when evening comes, there will be light.
8 ULB ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು. BSB BSB: And on that day living water will flow out from Jerusalem, half of it toward the Eastern Sea and the other half toward the Western Sea, in summer and winter alike.
9 ULB ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು. BSB BSB: On that day the LORD will become King over all the earth—the LORD alone, and His name alone.
10 ULB ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು. BSB BSB: All the land from Geba to Rimmon south of Jerusalem will be turned into a plain, but Jerusalem will be raised up and will remain in her place, from the Benjamin Gate to the site of the First Gate to the Corner Gate, and from the Tower of Hananel to the royal winepresses.
11 ULB ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು. BSB BSB: People will live there, and never again will there be an utter destruction. So Jerusalem will dwell securely.
12 ULB ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು. BSB BSB: And this will be the plague with which the LORD strikes all the peoples who have warred against Jerusalem: Their flesh will rot while they stand on their feet, their eyes will rot in their sockets, and their tongues will rot in their mouths.
13 ULB ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು. BSB BSB: On that day a great panic from the LORD will come upon them, so that each will seize the hand of another, and the hand of one will rise against the other.
14 ULB ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು. BSB BSB: Judah will also fight at Jerusalem, and the wealth of all the surrounding nations will be collected—gold, silver, and apparel in great abundance.
15 ULB ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು. BSB BSB: And a similar plague will strike the horses and mules, camels and donkeys, and all the animals in those camps.
16 ULB ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು. BSB BSB: Then all the survivors from the nations that came against Jerusalem will go up year after year to worship the King, the LORD of Hosts, and to celebrate the Feast of Tabernacles.
17 ULB ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ. BSB BSB: And should any of the families of the earth not go up to Jerusalem to worship the King, the LORD of Hosts, then the rain will not fall on them.
18 ULB ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು. BSB BSB: And if the people of Egypt will not go up and enter in, then the rain will not fall on them; this will be the plague with which the LORD strikes the nations who do not go up to celebrate the Feast of Tabernacles.
19 ULB ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ. BSB BSB: This will be the punishment of Egypt and of all the nations that do not go up to celebrate the Feast of Tabernacles.
20 ULB ಆ ದಿನದಲ್ಲಿ, <<ಯೆಹೋವನಿಗೆ ಮೀಸಲು>> ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು. BSB BSB: On that day, HOLY TO THE LORD will be inscribed on the bells of the horses, and the cooking pots in the house of the LORD will be like the sprinkling bowls before the altar.
21 ULB ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ. BSB BSB: Indeed, every pot in Jerusalem and Judah will be holy to the LORD of Hosts, and all who sacrifice will come and take some pots and cook in them. And on that day there will no longer be a Canaanite in the house of the LORD of Hosts.