1 ULB ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು. BSB BSB: Then the angel showed me Joshua the high priest standing before the angel of the LORD, with Satan standing at his right hand to accuse him.
2 ULB ಆಗ ಯೆಹೋವನ ದೂತನು ಸೈತಾನನಿಗೆ, <<ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?>> ಎಂದು ಹೇಳಿದನು. BSB BSB: And the LORD said to Satan: “The LORD rebukes you, Satan! Indeed, the LORD, who has chosen Jerusalem, rebukes you! Is not this man a firebrand snatched from the fire?”
3 ULB ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು, BSB BSB: Now Joshua was dressed in filthy garments as he stood before the angel.
4 ULB ದೇವದೂತನು ತನ್ನ ಸೇವಕರಿಗೆ, <<ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ>> ಎಂದು ಅಪ್ಪಣೆ ಕೊಟ್ಟು ಅವನಿಗೆ, <<ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು>> ಎಂದು ಹೇಳಿದನು. BSB BSB: So the angel said to those standing before him, “Take off his filthy clothes!” Then he said to Joshua, “See, I have removed your iniquity, and I will clothe you with splendid robes.”
5 ULB <<ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ>> ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು. BSB BSB: Then I said, “Let them put a clean turban on his head.” So a clean turban was placed on his head, and they clothed him, as the angel of the LORD stood by.
6 ULB ಆಗ ಯೆಹೋವನ ದೂತನು ಯೆಹೋಶುವನಿಗೆ ಈ ಮಾತನ್ನು ಕೊಟ್ಟನು. BSB BSB: Then the angel of the LORD gave this charge to Joshua:
7 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು. BSB BSB: “This is what the LORD of Hosts says: ‘If you walk in My ways and keep My instructions, then you will govern My house and will also have charge of My courts; and I will give you a place among these who are standing here.
8 ULB ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು. BSB BSB: Hear now, O high priest Joshua, you and your companions seated before you, who are indeed a sign. For behold, I am going to bring My servant, the Branch.
9 ULB ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. <ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.> BSB BSB: See the stone I have set before Joshua; on that one stone are seven eyes. Behold, I will engrave on it an inscription, declares the LORD of Hosts, and I will remove the iniquity of this land in a single day.
10 ULB <<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.>>> BSB BSB: On that day, declares the LORD of Hosts, you will each invite your neighbor to sit under your own vine and fig tree.’”