1 ULB ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ <<ಏನು ನೋಡುತ್ತೀ?>> ಎಂದು ಕೇಳಲು ನಾನು, BSB BSB: Then the angel who was speaking with me returned and woke me, as a man is awakened from his sleep.
2 ULB <<ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ; BSB BSB: “What do you see?” he asked. “I see a solid gold lampstand,” I replied, “with a bowl at the top and seven lamps on it, with seven spouts to the lamps.
3 ULB ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇದೆ>> ಎಂದು ಹೇಳಿದೆನು. BSB BSB: There are also two olive trees beside it, one on the right side of the bowl and the other on its left.”
4 ULB ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, <<ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?>> ಎಂದು ಕೇಳಿದ್ದಕ್ಕೆ, BSB BSB: “What are these, my lord?” I asked the angel who was speaking with me.
5 ULB ಆ ದೇವದೂತನು <<ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?>> ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, <<ನಾನು ಇಲ್ಲ ಸ್ವಾಮಿ>> ಎಂದು ಅರಿಕೆ ಮಾಡಿದೆನು. BSB BSB: “Do you not know what they are?” replied the angel. “No, my lord,” I answered.
6 ULB ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, <<ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ>> ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. BSB BSB: So he said to me, “This is the word of the LORD to Zerubbabel: Not by might nor by power, but by My Spirit, says the LORD of Hosts.
7 ULB ದೊಡ್ಡ ಬೆಟ್ಟವೇ, <<ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ>> ಎಂಬ ಜನಘೋಷವಾಗುವುದು. BSB BSB: What are you, O great mountain? Before Zerubbabel you will become a plain. Then he will bring forth the capstone accompanied by shouts of ‘Grace, grace to it!’”
8 ULB ಅಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ, BSB BSB: Then the word of the LORD came to me, saying,
9 ULB <<ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ>> ಎಂದು ನನಗೆ ಗೊತ್ತಾಗುವುದು. BSB BSB: “The hands of Zerubbabel have laid the foundation of this house, and his hands will complete it. Then you will know that the LORD of Hosts has sent me to you.
10 ULB ಆಗ ದೂತನು <<ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಿದವರು ಯಾರು? BSB BSB: For who has despised the day of small things? But these seven eyes of the LORD, which scan the whole earth, will rejoice when they see the plumb line in the hand of Zerubbabel.”
11 ULB ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?>> ಎಂದೆನು. BSB BSB: Then I asked the angel, “What are the two olive trees on the right and left of the lampstand?”
12 ULB ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ. BSB BSB: And I questioned him further, “What are the two olive branches beside the two gold pipes from which the golden oil pours?”
13 ULB ಅದಕ್ಕೆ ಆ ದೂತನು ನನಗೆ, <<ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?>> ಎಂದು ಕೇಳಿದಾಗ ನಾನು, <<ಇಲ್ಲ ಸ್ವಾಮೀ>> ಎಂದೆ. BSB BSB: “Do you not know what these are?” he inquired. “No, my lord,” I replied.
14 ULB ಅದಕ್ಕೆ ಅವನು, <<ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ>> ಎಂದು ಹೇಳಿದನು. BSB BSB: So he said, “These are the two anointed ones who are standing beside the Lord of all the earth.”