1 ULB ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು. BSB BSB: Again the word of the LORD of Hosts came to me, saying:
2 ULB ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, <<ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.>> BSB BSB: This is what the LORD of Hosts says: “I am jealous for Zion with great zeal; I am jealous for her with great fervor.”
3 ULB ಯೆಹೋವನು ಇಂತೆನ್ನುತ್ತಾನೆ, <<ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.>> BSB BSB: This is what the LORD says: “I will return to Zion and dwell in Jerusalem. Then Jerusalem will be called the City of Truth, and the mountain of the LORD of Hosts will be called the Holy Mountain.”
4 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು. BSB BSB: This is what the LORD of Hosts says: “Old men and old women will again sit along the streets of Jerusalem, each with a staff in hand because of great age.
5 ULB ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.>> BSB BSB: And the streets of the city will be filled with boys and girls playing there.”
6 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?>> ಇದು ಸೇನಾಧೀಶ್ವರ ಯೆಹೋವನ ನುಡಿ. BSB BSB: This is what the LORD of Hosts says: “If this is impossible in the eyes of the remnant of this people in these days, should it also be impossible in My eyes?” declares the LORD of Hosts.
7 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು, BSB BSB: This is what the LORD of Hosts says: “I will save My people from the land of the east and from the land of the west.
8 ULB ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.>> BSB BSB: I will bring them back to dwell in Jerusalem, where they will be My people, and I will be their faithful and righteous God.”
9 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ! BSB BSB: This is what the LORD of Hosts says: “Let your hands be strong, you who now hear these words spoken by the prophets who were present when the foundations were laid to rebuild the temple, the house of the LORD of Hosts.
10 ULB ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು. BSB BSB: For before those days neither man nor beast received wages, nor was there safety from the enemy for anyone who came or went, for I had turned every man against his neighbor.
11 ULB ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. BSB BSB: But now I will not treat the remnant of this people as I did in the past,” declares the LORD of Hosts.
12 ULB <<ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು. BSB BSB: “For the seed will be prosperous, the vine will yield its fruit, the ground will yield its produce, and the skies will give their dew. To the remnant of this people I will give all these things as an inheritance.
13 ULB ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!>> BSB BSB: As you have been a curse among the nations, O house of Judah and house of Israel, so I will save you, and you will be a blessing. Do not be afraid; let your hands be strong.”
14 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ BSB BSB: For this is what the LORD of Hosts says: “Just as I resolved to bring disaster upon you when your fathers provoked Me to anger, and I did not relent,” says the LORD of Hosts,
15 ULB ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನು ನುಡಿ. BSB BSB: “so now I have resolved to do good again to Jerusalem and Judah. Do not be afraid.
16 ULB <<ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ; BSB BSB: These are the things you must do: Speak truth to one another, render true and sound judgments in your gates,
17 ULB ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.>> BSB BSB: do not plot evil in your hearts against your neighbor, and do not love to swear falsely, for I hate all these things,” declares the LORD.
18 ULB <<ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು. BSB BSB: Then the word of the LORD of Hosts came to me, saying,
19 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.>>> BSB BSB: “This is what the LORD of Hosts says: The fasts of the fourth, the fifth, the seventh, and the tenth months will become times of joy and gladness, cheerful feasts for the house of Judah. Therefore you are to love both truth and peace.”
20 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು; BSB BSB: This is what the LORD of Hosts says: “Peoples will yet come—the residents of many cities—
21 ULB ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, <ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ> ಎಂದು ಹೇಳುವರು. BSB BSB: and the residents of one city will go to another, saying: ‘Let us go at once to plead before the LORD and to seek the LORD of Hosts. I myself am going.’
22 ULB ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.>> BSB BSB: And many peoples and strong nations will come to seek the LORD of Hosts in Jerusalem and to plead before the LORD.”
23 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, <ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ>>> ಎಂದು ಹೇಳುವರು. BSB BSB: This is what the LORD of Hosts says: “In those days ten men from the nations of every tongue will tightly grasp the robe of a Jew, saying, ‘Let us go with you, for we have heard that God is with you.’”