1 ULB ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ, BSB BSB: This is the burden of the word of the LORD against the land of Hadrach and Damascus its resting place—for the eyes of men and of all the tribes of Israel are upon the LORD—
2 ULB ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ. BSB BSB: and also against Hamath, which borders it, as well as Tyre and Sidon, though they are very shrewd.
3 ULB ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ. BSB BSB: Tyre has built herself a fortress; she has heaped up silver like dust, and gold like the dirt of the streets.
4 ULB ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು. BSB BSB: Behold, the Lord will impoverish her and cast her wealth into the sea, and she will be consumed by fire.
5 ULB ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು; BSB BSB: Ashkelon will see and fear; Gaza will writhe in agony, as will Ekron, for her hope will wither. There will cease to be a king in Gaza, and Ashkelon will be uninhabited.
6 ULB ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು. BSB BSB: A mixed race will occupy Ashdod, and I will cut off the pride of the Philistines.
7 ULB ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು. BSB BSB: I will remove the blood from their mouths and the abominations from between their teeth. Then they too will become a remnant for our God; they will become like a clan in Judah, and Ekron will be like the Jebusites.
8 ULB ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ. BSB BSB: But I will camp around My house because of an army, because of those who march to and fro, and never again will an oppressor overrun My people, for now I keep watch with My own eyes.
9 ULB ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ. BSB BSB: Rejoice greatly, O Daughter of Zion! Shout in triumph, O Daughter of Jerusalem! See, your King comes to you, righteous and victorious, humble and riding on a donkey, on a colt, the foal of a donkey. 10 ULB ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು. BSB BSB: And I will cut off the chariot from Ephraim and the horse from Jerusalem, and the bow of war will be broken. Then He will proclaim peace to the nations. His dominion will extend from sea to sea, and from the Euphrates to the ends of the earth.
11 ULB ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು. BSB BSB: As for you, because of the blood of My covenant, I will release your prisoners from the waterless pit.
12 ULB ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ. BSB BSB: Return to your stronghold, O prisoners of hope; even today I declare that I will restore to you double.
13 ULB ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು. BSB BSB: For I will bend Judah as My bow and fit it with Ephraim. I will rouse your sons, O Zion, against the sons of Greece. I will make you like the sword of a mighty man.
14 ULB ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು. BSB BSB: Then the LORD will appear over them, and His arrow will go forth like lightning. The Lord GOD will sound the ram’s horn and advance in the whirlwinds of the south.
15 ULB ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು. BSB BSB: The LORD of Hosts will shield them. They will destroy and conquer with slingstones; they will drink and roar as with wine. And they will be filled like sprinkling bowls, drenched like the corners of the altar.
16 ULB ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು. BSB BSB: On that day the LORD their God will save them as the flock of His people; for like jewels in a crown they will sparkle over His land.
17 ULB ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು. BSB BSB: How lovely they will be, and how beautiful! Grain will make the young men flourish, and new wine, the young women.