1 ULB ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ! BSB BSB: Woe to the city of oppressors, rebellious and defiled!
2 ULB ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ. BSB BSB: She heeded no voice; she accepted no correction. She does not trust in the LORD; she has not drawn near to her God.
3 ULB ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು. BSB BSB: Her princes are roaring lions; her judges are evening wolves, leaving nothing for the morning.
4 ULB ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ. BSB BSB: Her prophets are reckless, faithless men. Her priests profane the sanctuary; they do violence to the law.
5 ULB ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ. BSB BSB: The LORD within her is righteous; He does no wrong. He applies His justice morning by morning; He does not fail at dawn, yet the unjust know no shame.
6 ULB ಯೆಹೋವನು ಇಂತೆನ್ನುತ್ತಾನೆ, <<ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ. BSB BSB: “I have cut off the nations; their corner towers are destroyed. I have made their streets deserted with no one to pass through. Their cities are laid waste, with no man, no inhabitant.
7 ULB ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು>> ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು. BSB BSB: I said, ‘Surely you will fear Me and accept correction.’ Then her dwelling place would not be cut off despite all for which I punished her. But they rose early to corrupt all their deeds.
8 ULB ಯೆಹೋವನು ಇಂತೆನ್ನುತ್ತಾನೆ, <<ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ. BSB BSB: Therefore wait for Me,” declares the LORD, “until the day I rise to testify. For My decision is to gather nations, to assemble kingdoms, to pour out upon them My indignation—all My burning anger. For all the earth will be consumed by the fire of My jealousy.
9 ULB <<ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು. BSB BSB: For then I will restore pure lips to the peoples, that all may call upon the name of the LORD and serve Him shoulder to shoulder.
10 ULB ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು. BSB BSB: From beyond the rivers of Cush My worshipers, My scattered people, will bring Me an offering.
11 ULB <<ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ. BSB BSB: On that day you will not be put to shame for any of the deeds by which you have transgressed against Me. For then I will remove from among you those who rejoice in their pride, and you will never again be haughty on My holy mountain.
12 ULB ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು, BSB BSB: But I will leave within you a meek and humble people, and they will trust in the name of the LORD.
13 ULB ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.>> BSB BSB: The remnant of Israel will no longer do wrong or speak lies, nor will a deceitful tongue be found in their mouths. But they will feed and lie down, with no one to make them tremble.”
14 ULB ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು! BSB BSB: Sing for joy, O Daughter of Zion; shout aloud, O Israel! Be glad and rejoice with all your heart, O Daughter of Jerusalem!
15 ULB ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ. BSB BSB: The LORD has taken away your punishment; He has turned back your enemy. Israel’s King, the LORD, is among you; no longer will you fear any harm.
16 ULB ಆ ದಿನದಲ್ಲಿ ಯೆರೂಸಲೇಮಿಗೆ, <<ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ; BSB BSB: On that day they will say to Jerusalem: “Do not fear, O Zion; do not let your hands fall limp.
17 ULB ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು. BSB BSB: The LORD your God is among you; He is mighty to save. He will rejoice over you with gladness; He will quiet you with His love; He will rejoice over you with singing.”
18 ULB ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು. BSB BSB: “I will gather those among you who grieve over the appointed feasts, so that you will no longer suffer reproach.
19 ULB ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು. BSB BSB: Behold, at that time, I will deal with all who afflict you. I will save the lame and gather the scattered; and I will appoint praise and fame for the disgraced throughout the earth.
20 ULB ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು>> ಇದು ಯೆಹೋವನ ನುಡಿ. BSB BSB: At that time I will bring you in; yes, at that time I will gather you. For I will give you fame and praise among all the peoples of the earth when I restore your captives before your very eyes,” says the LORD.